ಬೆಂಗಳೂರು: ರಂಜಾನ್ ತಿಂಗಳಲ್ಲಿ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಅವಧಿಯಲ್ಲಿ ಬದಲಾವಣೆ ಮಾಡಿ ಉರ್ದು ಹಾಗೂ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.
ರಂಜಾನ್ ತಿಂಗಳಲ್ಲಿ ಉಪವಾಸ ಹಿನ್ನೆಲೆಯಲ್ಲಿ ಉರ್ದು ಪ್ರಾಥಮಿಕ, ಪ್ರೌಢಶಾಲೆಗಳ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಪ್ರತಿದಿನ ಅರ್ಧಗಂಟೆ ಮೊದಲು ತೆರಳಲು ಅವಕಾಶ ನೀಡಲಾಗಿದೆ.
ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ಅರ್ಧಗಂಟೆ ಮುಂಚಿತವಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಕಳುಹಿಸುವಂತೆ ಸೂಚನೆ ನೀಡಲಾಗಿದೆ. ರಂಜಾನ್ ಮಾಸದಲ್ಲಿ ಉಪವಾಸದ ವ್ರತ ಇರುವ ಕಾರಣಕ್ಕೆ ಕೇವಲ ರಂಜಾನ್ ಮಾಸದ ಒಂದು ತಿಂಗಳಿಗೆ ಮಾತ್ರ ಈ ಆದೇಶ ಅನ್ವಯವಾಗಲಿದೆ ಎಂದು ತಿಳಿಸಿದೆ.

