ಕೋಮು ದ್ವೇಷ ಕೇಸ್ ವಾಪಸ್ ಪಡೆದಿಲ್ಲ: ಬಿಜೆಪಿಗೆ ರಾಮಲಿಂಗಾರೆಡ್ಡಿ ತಿರುಗೇಟು

ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೋಮುಗಲಭೆ, ಧಾರ್ಮಿಕ ಘರ್ಷಣೆ, ನೈತಿಕ ಪೊಲೀಸ್‌ ಗಿರಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಮಾಡಿದಂತಹ ನೂರಾರು ಪ್ರಕರಣಗಳನ್ನು ವಾಪಾಸ್‌ ಪಡೆದಿದೆ. ಇದರಲ್ಲಿ ಪಿಎಫ್‌ಐ, ಎಸ್‌ಡಿಪಿಐ, ಭಜರಂಗದಳ, ಶ್ರೀರಾಮಸೇನೆಯವರ ಮೇಲಿದ್ದ ಪ್ರಕರಣಗಳು ಸೇರಿವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಶ್ವತ ನೀರಾವರಿಗೆ ಹೋರಾಟ ಮಾಡಿದವರು, ಸಂವಿಧಾನಕ್ಕೆ ಅಪಮಾನ ಮಾಡಿದವರ ವಿರುದ್ಧ ಹೋರಾಟ ಮಾಡಿದ ಎನ್. ಭಾಸ್ಕರ್, ಕನ್ನಡ ಕನ್ನಡಿಗರ ಪರವಾಗಿ ಹೋರಾಟ ನಡೆಸಿದ ರಕ್ಷಣಾ ವೇದಿಕೆ ನಾರಾಯಣಗೌಡ, ಗಣರಾಜ್ಯೋತ್ಸವ ಸಂದರ್ಭದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡದ ಕಾರಣಕ್ಕೆ ಪ್ರತಿಭಟನೆ, ಪೇಸಿಎಂ ಅಭಿಯಾನದಲ್ಲಿ ಪೋಸ್ಟರ್ ಅಂಟಿಸಿದವರ ವಿರುದ್ಧ ಹೀಗೆ ಒಂದಷ್ಟು ಜನಪರ ಹೋರಾಟಗಳನ್ನು ನಡೆಸುವಾಗ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಇವುಗಳಲ್ಲಿ ಹಳೆ ಹುಬ್ಬಳ್ಳಿ ಪ್ರಕರಣವು ಒಂದಾಗಿದೆ ಎಂದು ತಿಳಿಸಿದ್ದಾರೆ.

ನಾವು ಕಳೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 43 ಪ್ರಕರಣಗಳನ್ನು ವಾಪಾಸ್‌ ಪಡೆದಿದ್ದೇವೆ. ಇದರಲ್ಲಿ 42 ಪ್ರಕರಣಗಳು ನೆಲ, ಜಲ, ಭಾಷೆಗಾಗಿ ನಡೆಸಿದ ಹೋರಾಟಗಳಲ್ಲಿ ದಾಖಲಾಗಿದ್ದ ಪ್ರಕರಣಗಳು ಮತ್ತು ಉಳಿದ ಒಂದು ಪ್ರಕರಣ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಬಿಜೆಪಿ ಸರ್ಕಾರ ಉದ್ದೇಶಪೂರ್ವಕವಾಗಿ ಸಿಕ್ಕ ಸಿಕ್ಕವರ ಮೇಲೆ ಕೇಸ್‌ ದಾಖಲಿಸಿದ್ದಾಗಿದೆ. ಬಿಜೆಪಿಯವರ ದ್ವೇಷ ರಾಜಕಾರಣ ಮತ್ತು ಸಮಾಜವನ್ನು ವ್ಯವಸ್ಥಿತವಾಗಿ ದಾರಿ ತಪ್ಪಿಸುವ ಹುನ್ನಾರ ಇದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read