HomeKarnatakaBIG NEWS: 1 ರಿಂದ 10ನೇ ಕ್ಲಾಸ್ ವರೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಇಂಗ್ಲಿಷ್ ಮಾಧ್ಯಮ...

BIG NEWS: 1 ರಿಂದ 10ನೇ ಕ್ಲಾಸ್ ವರೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಇಂಗ್ಲಿಷ್ ಮಾಧ್ಯಮ ತರಗತಿ: ಘೋಷಣೆ

ರಾಮನಗರ: ಒಂದರಿಂದ ಹತ್ತನೇ ತರಗತಿವರೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಆರಂಭಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ.

ರಾಮನಗರ ಜಿಲ್ಲೆಯ ಕುದೂರಿನಲ್ಲಿ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿದ್ದು, ನಮ್ಮಿಂದ ಆ ಕೆಲಸ ಏಕೆ ಸಾಧ್ಯವಿಲ್ಲ ಎಂದು ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಯೋಜನೆ ಇರಲಿಲ್ಲ. ನಾವು ಅದನ್ನು ಜಾರಿಗೆ ತರುತ್ತಿದ್ದೇವೆ. ಒಂದರಿಂದ 10ನೇ ತರಗತಿಯವರೆಗೆ ಎಲ್ಲ ಸರ್ಕಾರಿ ಶಾಲೆಗಳಲ್ಲೂ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ತೆರೆಯುವುದಾಗಿ ಘೋಷಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular