HomeKarnatakaಹಿರಿಯೂರು ಬಸ್‌ ದುರಂತ ಪ್ರಕರಣ: ರಾಜ್ಯ ಸರ್ಕಾರ ಫುಲ್‌ ಅಲರ್ಟ್‌

ಹಿರಿಯೂರು ಬಸ್‌ ದುರಂತ ಪ್ರಕರಣ: ರಾಜ್ಯ ಸರ್ಕಾರ ಫುಲ್‌ ಅಲರ್ಟ್‌

ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್‌ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.

ಈ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಾಹನಗಳ ರಾತ್ರಿ ಸಂಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲಿ ಅಪಘಾತಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಪ್ರಮುಖ ಕಾರಣ ಚಾಲಕರು ನಿದ್ದೆ ಮಂಪರಿನಲ್ಲಿ ವಾಹನ ಚಾಲನೆ ಮಾಡುತ್ತಿರುವುದು. ಹೀಗಾಗಿ ರಾತ್ರಿ ಸಮಯ ಸಂಚಾರ ಮಾಡುವವರು ಸಂಜೆಯೇ ನಿದ್ದೆ ಮಾಡಿ ಎದ್ದರೆ ಒಳ್ಳೆಯದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಿದ್ದೆ ಮಂಪರಿನಲ್ಲಿ ಆಗುವ ಅನಾಹುತ ತಪ್ಪಿಸಲು ಚಾಲಕರು ಕೆಲಸಮಯ ವಾಹನಗಳನ್ನು ನಿಲ್ಲಿಸಿ ವಿಶ್ರಾಂತಿ ಮಾಡಬೇಕು. ಅದರಲ್ಲೂ ಮಧ್ಯರಾತ್ರಿ 12 ರಿಂದ 4 ಗಂಟೆಗಳ ಕಾಲ ನ್ಯಾಷನಲ್‌ ಹೈವೇಗಳ ಬೇಸ್‌ಗಳಲ್ಲಿ ವಿಶ್ರಾಂತಿ ಪಡೆಯುವಂತೆ ಹೊಸ ಗೈಡ್‌ಲೈನ್ಸ್‌ ಅನ್ನು ಕೇಂದ್ರ ಸರ್ಕಾರ ರೂಪಿಸುವಂತೆ ಪತ್ರ ಬರೆಯುವುದಾಗಿ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular