HomeLatest NewsBREAKING: ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆದು ಸಂಪುಟದಲ್ಲಿ ಮುಂದುವರೆಯುತ್ತಾರೆ: ರಣದೀಪ್ ಸುರ್ಜೇವಾಲ ಮಾಹಿತಿ

BREAKING: ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆದು ಸಂಪುಟದಲ್ಲಿ ಮುಂದುವರೆಯುತ್ತಾರೆ: ರಣದೀಪ್ ಸುರ್ಜೇವಾಲ ಮಾಹಿತಿ

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಮನವೊಲಿಕೆ ಯತ್ನ ಯಶಸ್ವಿಯಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಾಯಕರು ನಡೆಸಿದ ಸಂಧಾನ ಸಭೆ ಫಲಪ್ರದವಾಗಿದ್ದು, ರಾಮಲಿಂಗಾರೆಡ್ಡಿ ರಾಜೀನಾಮೆ ಹಿಂಪಡೆಯಲು ನಿರ್ಧರಿಸಿದ್ದಾರೆ.

ರಾಮಲಿಂಗಾರೆಡ್ಡಿ ಜೊತೆ ಚರ್ಚೆ ಬಳಿಕ ಬೆಂಗಳೂರಿನ ಖಾಸಗಿ ಹೀಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆದು ಸಂಪುಟದಲ್ಲಿ ಮುಂದುವರೆಯಲಿದ್ದಾರೆ. ಎಲ್ಲಾ ಗೊಂದಲಗಳನ್ನು ಬಗೆಹರಿಸಲಾಗಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮಲಿಂಗಾರೆಡ್ಡಿ ಹಾಗೂ ಬಿ.ಕೆ.ಹರಿಪ್ರಸಾದ್ ಕಾಲೇಜು ದಿನಗಳಿಂದಲೂ ಒಂದೇ ಕ್ಲಾಸಿನವರು, ರಾಮಲಿಂಗಾರೆಡ್ಡಿ ಕಾಂಗ್ರೆಸ್ ಪಕ್ಷಕ್ಕೆ ಆಸ್ತಿಯಿದ್ದಂತೆ. ಅವರು 1989ರಿಂದಲೇ ಶಾಸಕರಾಗಿ ಆಯ್ಕೆಯಾದವರು. ಪಕ್ಷಕ್ಕೆ ಅವರ ಸೇವೆ ಅಪಾರ. ರಾಮಲಿಂಗಾರೆದ್ಡಿ ತಮ್ಮ ರಾಜೀನಾಮೆ ಹಿಂಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular