HomeLatest NewsBREAKING: ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

BREAKING: ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆಯಾಗಿತ್ತು. ಆದರೆ ರಾಮಲಿಂಗಾ ರೆಡ್ಡಿ ನಗರಾಭಿವೃದ್ಧಿ ಖಾತೆಗೆ ಪಟ್ಟು ಹಿಡಿದಿದ್ದರು. ಕೊನೆ ಕ್ಷಣದವರೆಗೂ ತನ್ನ ಖಾತೆ ಬದಲಿಸಿ ನಗರಾಭಿವೃದ್ಧಿ ಖಾತೆ ನೀಡದ ಕಾರಣ ತೀವ್ರವಾಗಿ ಬೇಸರಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ ವಿಚಾರ ತಿಳಿಯಿತು. ಅವರು ಜಲಸಂಪನ್ಮೂಲ ಬದಲು ಬೇರೆ ಖಾತೆ ಕೇಳಿದ್ದಾರೆ. ಈ ಬಗ್ಗೆ ನಾನು ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇನೆ ಎಂದರು.

ರಾಮಲಿಂಗಾರೆಡ್ಡಿ ಹಿರಿಯ ನಾಯಕರು, ಅವರು ನನಗೆ ಬಹಳ ಆಪ್ತರು. ನೋಡೋಣ ಅವರೊಂದಿಗೆ ನಾನು ಮಾತನಾಡುತ್ತೇನೆ. ಸಮಸ್ಯೆ ಬಗೆಹರಿಸುತ್ತೇನೆ. ಯಾವುದೇ ತೊಂದರೆಯಾಗದಂತೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.

ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದ ರಾಮಲಿಂಗಾರೆಡ್ಡಿ:

ಬೆಂಗಳೂರು: ಡಿ.ಕೆ.ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಯಾದ 48 ಗಂಟೆಯೊಳಗೆ ಸಚಿವರೊಬ್ಬರು ಪದತ್ಯಾಗ ಮಾಅಡಿದ್ದಾರೆ. ಖಾತೆ ಹಂಚಿಕೆಯಾದ ಕೇವಲ ೨೪ ಗಂಟೆಯೊಳಗೆ ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ತೀವ್ರ ಅಸಮಾಧಾನಗೊಂಡಿರಿವ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆಯಾಗಿತ್ತು. ಆದರೆ ರಾಮಲಿಂಗಾ ರೆಡ್ಡಿ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದರು. ತನಗೆ ಜಲಸಂಪನ್ಮೂಲ ಖಾತೆ ಅರ್ಥಮಾಡಿಕೊಳ್ಳಲು 6 ತಿಂಗಳು ಬೇಕು. ಈ ಖಾತೆ ನನಗೆ ಬೇಡ ನಗರಾಭಿವೃದ್ಧಿ ಖಾತೆ ನೀಡುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ತಿಳಿಸಿದ್ದರು. ಆದರೆ ನಗರಾಭಿವೃದ್ಧಿ ಖಾತೆ ಕೃಷ್ಣಭೈರೇಗೌಡ ಅವರಿಗೆ ಹಂಚಿಕೆಯಾಗಿದ್ದು, ಖಾತೆ ಬದಲಾವಣೆಗೆ ಒಪ್ಪಿಲ್ಲ. ರಾಮಲಿಂಗಾ ರೆಡಿ ಮನವೊಲಿಸಲು ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕರು ಸಾಕಷ್ಟು ಯತ್ನಿಸಿದರೂ ರಾಮಲಿಂಗಾ ರೆದು ತಮ್ಮ ಪಟ್ಟು ಬದಲಿಸಿಲ್ಲ. ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದಾರೆ.

ಕೋರಮಂಗಲದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಗೆ ಸಹಿ ಹಾಕಿದ ಪತ್ರವನ್ನು ಪ್ರದರ್ಶಿಸಿದರು. ಜಲಸಂಪನ್ಮೂಲ ಖಾತೆ ನನಗೆ ಬೇಡ ನಗರಾಭಿವೃದ್ಧಿ ಖಾತೆ ಕೊಟ್ಟರೆ ನಿರ್ವಹಿಸುತ್ತೇನೆ ಎಂದು ಹೇಳಿದ್ದೆ. ಈ ಹಿಂದೆ ಡಿ.ಕೆ.ಶಿವಕುಮಾರ್ ಎರಡು ಬಾರಿ ನನಗೆ ಮಾತುಕೊಟ್ಟಿದ್ದರು. ಮುಂದೆ ನಾನು ಸಿಎಂ ಆದಾಗ ನಗರಾಭಿವೃದ್ಧಿ ಖಾತೆ ನೀಡುವುದಾಗಿ ಹೇಳಿದ್ದರು. ಆದರೆ ಈಗ ಅವರೇ ಮಾತು ತಪ್ಪಿದ್ದಾರೆ. ಜಲಸಂಪನ್ಮೂಲ ಖಾತೆ ಅರ್ಥ ಮಾಡಿಕೊಳ್ಳಲು ಸಮಯ ಬೇಕು. ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ನಾನು ಕೆಲಸ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

2023 ರಲ್ಲಿ ಡಿ.ಕೆ ಶಿವಕುಮಾರ್ ಅವರು ಡಿಸಿಎಂ ಆಗಿದ್ದಾಗ, ನನಗೆ ಸಾರಿಗೆ ಇಲಾಖೆ ನೀಡಿದ ಸಂದರ್ಭದಲ್ಲಿ, ‘ನಾನು ಮುಖ್ಯಮಂತ್ರಿಯಾದಾಗ ಬೆಂಗಳೂರು ನಗರಾಭಿವೃದ್ಧಿ ಖಾತೆ ನನ್ನ ಬಳಿ ಇರುತ್ತದೆ, ಅದನ್ನೇ ನಿಮಗೆ ನೀಡುತ್ತೇನೆ’ ಎಂದು ಭರವಸೆ ನೀಡಿದ್ದರು. ಈ ಭರವಸೆಯನ್ನು ನೂತನ ಮುಖ್ಯಮಂತ್ರಿಗಳು ಉಳಿಸಿಕೊಂಡಿಲ್ಲ. ಇದರಿಂದ ನನಗೆ ಬಹಳ ಬೇಸರವಾಗಿದೆ. ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ನಾನು ಕೆಲಸ ಮಾಡಲು ಸಾಧ್ಯವಿಲ್ಲ. ಹಾಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.

ನಾನು ಕಾಂಗ್ರೆಸ್ ನಲ್ಲಿ ಶಾಸಕನಾಗಿ ಮುಂದುವರೆಯುತ್ತೇನೆ. ಬೇರೆ ಯಾವುದೇ ಖಾತೆ ನನಗೆ ಬೇಡ. ಈಗ ಅವರು ಖಾತೆ ಬದಲಾಯಿಸಿದರೂ ಅದನ್ನು ನಾನು ಒಪ್ಪಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ನನಗೆ ಯಾರ ಮೇಲೂ ಸಿಟ್ಟು, ಕೋಪವಿಲ್ಲ. ಹೊಸ ಸರ್ಕಾರದ ಮೇಲೂ ಕೋಪವಿಲ್ಲ, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರ ಮೇಲೂ ಇಲ್ಲ. ಬೇರೆ ಯಾರ ಮೇಲೂ ಯಾವುದೇ ಅಸಮಾಧಾನ ಕೋಪವಿಲ್ಲ. ನನಗೆ ಜಲಸಂಪನ್ಮೂಲ ನಿಭಾಯಿಸಲು ಸಾಧ್ಯವಿಲ್ಲ. ಹಾಗಾಗಿ ನಾನು ರಾಜೀನಾಮೆ ಕೊಟ್ಟಿದ್ದೇನೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular