HomeUncategorizedBIG NEWS: ರಾಜೀನಾಮೆ ಸ್ವೀಕರಿಸಲ್ಲ, ಹಿಂಪಡೆಯಿರಿ ಎಂದು ಸಿಎಂ ಹಾಗೂ ಸುರ್ಜೇವಾಲ ಹೇಳಿದ್ದಾರೆ: ರಾಮಲಿಂಗಾರೆಡ್ಡಿ

BIG NEWS: ರಾಜೀನಾಮೆ ಸ್ವೀಕರಿಸಲ್ಲ, ಹಿಂಪಡೆಯಿರಿ ಎಂದು ಸಿಎಂ ಹಾಗೂ ಸುರ್ಜೇವಾಲ ಹೇಳಿದ್ದಾರೆ: ರಾಮಲಿಂಗಾರೆಡ್ಡಿ

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಕ್ಕಿಲ್ಲ ಎಂದು ಅಸಮಾಧಾನಗೊಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾರೆಡ್ಡಿ ಅವರ ಅಸಮಾಧಾನ ಶಮನಗೊಳ್ಳುವ ಲಕ್ಷಣಗಳು ಕಾಣುತ್ತಿವೆ. ಇಂದು ಸಂಜೆ ವೇಳೆಗೆ ರಾಮಲಿಂಗಾರೆಡ್ಡಿ ರಾಜೀನಾಮೆ ಹಿಂಪಡೆಯುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಡರಾತ್ರಿ ರಾಮಲಿಂಗಾರೆಡ್ಡಿ ಅವರೊಂದಿಗೆ ನಡೆಸಿದ ಮನವೊಲಿಕೆ ಮಾತುಕತೆ ಯಶಸ್ವಿಯಾಗಿದ್ದು, ಇಂದು ರಾಮಲಿಂಗಾರೆಡ್ಡಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸುರ್ಜೇವಾಲಾ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಜೊತೆಗೆ ಹೆಚ್ಚುವರಿ ಖಾತೆ ನೀಡುವುದಾಗಿ ಹೊಸ ಆಫರ್ ಕೊಟ್ಟಿದ್ದಾರೆ. ಅಲ್ಲದೇ ರಾಜೀನಾಮೆ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ.

ಸುರ್ಜೇವಾಲಾ ಭೇಟಿ ಬಳಿಕ ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲಾ ಇಬ್ಬರ ಜೊತೆಗೂ ಮಾತನಾಡಿದ್ದೇನೆ. ಇಬ್ಬರು ನಾಯಕರು ನಿಮ್ಮ ರಾಜೀನಾಮೆಯನ್ನು ಒಪ್ಪುವುದಿಲ್ಲ, ಸ್ವೀಕರಿಸಲ್ಲ ಎಂದಿದ್ದಾರೆ. ರಾಜೀನಾಮೆ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚುವರಿ ಖಾತೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ನಗರಾಭಿವೃದ್ಧಿ ಖಾತೆ ನೀಡುವುದಿಲ್ಲ ಎಂದಾದರೆ ಮೊದಲೇ ಹೇಳಬೇಕಿತ್ತು. ಮಾತು ಕೊಟ್ಟು ಈಗ ಹೀಗೆ ಮಾಡುವುದು ಸರಿಯಲ್ಲ. ಬೇರೆ ಖಾತೆ ನೀಡಲಾಗುತ್ತದೆ ಎಂದು ಮೊದಲೇ ತಿಳಿದಿದ್ದರೆ ನಾನು ಸಚಿವ ಸ್ಥಾನವನ್ನೇ ಸ್ವೀಕರಿಸುತ್ತಿರಲಿಲ್ಲ ಎಂದಿದ್ದೇನೆ. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಈ ಸಮಸ್ಯೆಯನ್ನು ಸರಿಪಡಿಸಲಾಗುವುದು ಎಂದು ಸುರ್ಜೇವಾಲ ಭರವಸೆ ನೀಡಿದ್ದಾರೆ. ಸುರ್ಜೇವಾಲಾ ಹಾಗೂ ಡಿ.ಕೆ.ಶಿವಕುಮಾರ್ ಏನು ನಿರ್ಧಾರ ಕೈಗೊಳ್ಳುತ್ತಾರೆ ಕಾದುನೋಡೋಣ. ನಾನು ಸಂಜೆಯವರೆಗೆ ಕಾಯುತ್ತೇನೆ. ಆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular