HomeKarnatakaBREAKING: ರಾಮಲಿಂಗಾರೆಡ್ಡಿಗೆ ಸುರ್ಜೇವಾಲ ಮತ್ತೊಂದು ಆಫರ್: ಜಲಸಂಪನ್ಮೂಲ ಜೊತೆಗೆ ಹೆಚ್ಚುವರಿ ಖಾತೆ ನೀಡುವ ಭರವಸೆ

BREAKING: ರಾಮಲಿಂಗಾರೆಡ್ಡಿಗೆ ಸುರ್ಜೇವಾಲ ಮತ್ತೊಂದು ಆಫರ್: ಜಲಸಂಪನ್ಮೂಲ ಜೊತೆಗೆ ಹೆಚ್ಚುವರಿ ಖಾತೆ ನೀಡುವ ಭರವಸೆ

ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ಅಸಮಾಧಾನಗೊಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಮನವೊಲಿಕೆಗೆ ಹೈಕಮಾಂಡ್ ನಾಯಕರು ಯತ್ನಿಸುತ್ತಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಡರಾತ್ರಿವರೆಗೂ ನಡೆಸಿದ ಸಂಧಾನ ಸಭೆ, ಮನವೊಲಿಕೆ ಯತ್ನದ ಬಳಿಕ ಇದೀಗ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ರಾಮಲಿಂಗಾರೆಡ್ಡಿ ಅವರಿಗೆ ರಾಜೀನಾಮೆ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ.

ಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾತುಕತೆ ಬಳಿಕ ರಾಮಲಿಂಗಾರೆಡ್ಡಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಸುರ್ಜೇವಾಲಾ ರಾಮಲಿಂಗಾರೆದ್ಡಿ ಅವರಿಗೆ ಮತ್ತೊಂದು ಆಫರ್ ನೀಡಿದ್ದಾರೆ. ಈಗಿರುವ ಜಲಸಂಪನ್ಮೂಲ ಖಾತೆ ಜೊತೆಗೆ ಹೆಚ್ಚುವರಿ ಖಾತೆಯನ್ನು ಕೊಡುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚುವರಿ ಖಾತೆಯನ್ನೂ ಕೊಡುತ್ತೇವೆ. ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ಆದರೆ ರಾಮಲಿಂಗಾರೆಡ್ಡಿ ಯಾವುದೇ ನಿರ್ಧಾರವನ್ನೂ ತಿಳಿಸುತ್ತಿಲ್ಲ. ರಾಮಲಿಂಗಾರೆಡ್ಡಿ ಹಾಗೂ ಸುರ್ಜೇವಾಲಾ ಸುಮಾರು 25 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular