HomeKarnatakaBIG NEWS: ಪೂಜೆ, ಪುನಸ್ಕಾರಕ್ಕೆ ಆನ್ ಲೈನ್ ವ್ಯವಸ್ಥೆ; ವಿಶೇಷ ಆಪ್ ಬಿಡುಗಡೆ; ಸಚಿವ ರಾಮಲಿಂಗಾರೆಡ್ಡಿ...

BIG NEWS: ಪೂಜೆ, ಪುನಸ್ಕಾರಕ್ಕೆ ಆನ್ ಲೈನ್ ವ್ಯವಸ್ಥೆ; ವಿಶೇಷ ಆಪ್ ಬಿಡುಗಡೆ; ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಆನ್ ಲೈನ್ ವ್ಯವಸ್ಥೆ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಮುಜರಾಯಿ ಇಲಾಖೆ ವ್ಯಾಪ್ತಿಯ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದ್ದು, ಎಲ್ಲಾ ದೇವಾಲಯಗಳ ಆವರಣಗಳನ್ನು ವ್ಯವಸ್ಥಿತವಾಗಿ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ದೇವಾಲಯಗಳಲ್ಲಿ ಸಿಸಿಟಿವಿ ಕಡ್ಡಾಯ ಮಾಡಲು ತಿಳಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೂಜೆ, ಪುನಸ್ಕಾರಕ್ಕೆ ಆನ್ ಲೈನ್ ನಲ್ಲಿ ಬುಕ್ ಮಾಡಲು ವಿಶೇಷ ಆಪ್ ಬಿಡುಗಡೆ ಮಾಡಲಾಗುವುದು. ಭಕ್ತರ ಅನುಕೂಲಕ್ಕಾಗಿ ಆನ್ ಲೈನ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ದೇವಸ್ಥಾನಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಗಮನ ಹರಿಸುವಂತೆ ಸೂಚಿಸಲಾಗಿದೆ.

ಕಾಶಿ ಯಾತ್ರೆ, ಮಾನಸ ಸರೋವರ, ಚಾರ್ ಧಾಮ್ ಮತ್ತು ಭಾರತ್ ಗೌರವ್ ಕಾಶಿ ಯಾತ್ರೆಗೆ ಸಹಾಯ ಆಗಲು ಆಪ್ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular