HomeKarnatakaBIG NEWS: ಅಯೋಧ್ಯೆ ರಾಮಮಂದಿರ ಉದ್ಘಾಟನೆ ದಿನ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ

BIG NEWS: ಅಯೋಧ್ಯೆ ರಾಮಮಂದಿರ ಉದ್ಘಾಟನೆ ದಿನ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ

ಬೆಂಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರತಿಷ್ಠಾಪನೆ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮುಜರಾಯಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಲಿದ್ದಾರೆ. ಜನವರಿ 22ರಂದು ಸೋಮವಾರ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ ಕಾರ್ಯ ನಡೆಯುವ ಸಂದರ್ಭದಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಬೇಕು. ಇದಕ್ಕೆ ಅನುಸರಿಸಬೇಕಿರುವ ಕ್ರಮಗಳ ಕುರಿತು ಸುತ್ತೋಲೆಯಲ್ಲಿ ಮಾಹಿತಿ ನೀಡಲಾಗುವುದು.

ಶ್ರೀ ರಾಮನ ದೇವಾಲಯ ಮಾತ್ರವಲ್ಲದೆ, ಎಲ್ಲಾ ದೇವಾಲಯಗಳಲ್ಲಿಯೂ ವಿಶೇಷ ಪೂಜೆ ಸಲ್ಲಿಸಲು ಪ್ರತ್ಯೇಕ ಆದೇಶ ಹೊರಡಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular