HomeKarnatakaಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ರಚನೆ: ಕಂದಾಯ ಇಲಾಖೆ ಆದೇಶ

ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ರಾಜ್ಯ ಧಾರ್ಮಿಕ ಪರಿಷತ್ ರಚನೆ: ಕಂದಾಯ ಇಲಾಖೆ ಆದೇಶ

ಬೆಂಗಳೂರು: ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಮುಜರಾಯಿ ಇಲಾಖೆಯ ಧಾರ್ಮಿಕ ಪರಿಷತ್ ಅನ್ನು ಹೊಸದಾಗಿ ರಚನೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯ 8 ಮಂದಿ ನಾಮನಿರ್ದೇಶಿತ ಸದಸ್ಯರನ್ನು ಒಳಗೊಂಡ ಧಾರ್ಮಿಕ ಪರಿಷತ್ ರಚನೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮಲಿಂಗಾರೆಡ್ಡಿ ಅಧ್ಯಕ್ಷರಾಗಿದ್ದು, ಉಪಾಧ್ಯಕ್ಷರಾಗಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ(ಮುಜರಾಯಿ), ಪದನಿಮಿತ್ತ ಕಾರ್ಯದರ್ಶಿಯಾಗಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರನ್ನು ನೇಮಿಸಲಾಗಿದೆ.

ಜಿಲ್ಲಾ ನ್ಯಾಯಾಧೀಶ ಎನ್. ಶ್ರೀವತ್ಸ ಕೆದಿಲಾಯ ನ್ಯಾಯಿಕ ಸದಸ್ಯರಾಗಿರುತ್ತಾರೆ. ಡಾ. ಮರುಳಸಿದ್ದ ಪಂಡಿತಾರಾಧ್ಯ ಶಿವಾಚಾರ್ಯರು, ಬಿ.ಎಸ್. ದ್ವಾರಕನಾಥ್, ಡಾ.ಎ. ರಾಧಾಕೃಷ್ಣರಾಜು, ಕೆ.ಎಂ. ನಾಗರಾಜು, ಡಾ. ಮಹಾಂತೇಶ್ ಶಾಸ್ತ್ರಿ, ಮಲ್ಲಿಕಾ ಪ್ರಶಾಂತ ಪಕ್ಕಲಾ, ಚಂದ್ರಶೇಖರ್ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಧಾರ್ಮಿಕ ಪರಿಷತ್ ಗೆ ನೇಮಕ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular