HomeKarnatakaಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9 ಸಾವಿರ ಹುದ್ದೆಗಳ ಭರ್ತಿ

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9 ಸಾವಿರ ಹುದ್ದೆಗಳ ಭರ್ತಿ

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಖಾಲಿ ಹುದ್ದೆ ತುಂಬಿರಲಿಲ್ಲ. ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2 ಸಾವಿರ ಹುದ್ದೆಗಳಿಗೆ ಈಗಾಗಲೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಉಳಿದವು ನೇಮಕಾತಿ ಪ್ರಕ್ರಿಯೆಯಲ್ಲಿವೆ. 5800 ಹೊಸ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈಗಾಗಲೇ 2400 ಬಸ್ ಗಳ ಖರೀದಿ ಆಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವ ನಿರ್ಧಾರ ಕೈಗೊಂಡಿಲ್ಲ. ನಾಲ್ಕು ನಿಗಮಗಳಿಂದ ಪ್ರಸ್ತಾವ ಬಂದ ನಂತರ ಟಿಕೆಟ್ ದರ ಹೆಚ್ಚಳದ ಬಗ್ಗೆ ಪರಿಶೀಲಿಸುವುದಾಗಿ ಸಚಿವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular