ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದವನಿಗೆ ಗುಂಡೇಟು

ರಾಮನಗರ: ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದವನ ಮೇಲೆ ಫೈರಿಂಗ್ ಮಾಡಲಾಗಿದೆ. ಹಲ್ಲೆ ನಡೆಸಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿ ಮತಿನ್ ಕಾಲಿಗೆ ಗುಂಡು ಹಾರಿಸಲಾಗಿದೆ. ರಾಮನಗರ ಟೌನ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೂರು ದಿನಗಳ ಹಿಂದೆ ವಡೇರಹಳ್ಳಿಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಗಲಾಟೆ ನಂತರ ಮತಿನ್ ಬೆಂಗಳೂರಿನಲ್ಲಿ ತಲೆಮರಿಸಿಕೊಂಡಿದ್ದು, ಆತನನ್ನು ಪೊಲೀಸರು ಬಂಧಿಸಿ ಸಂಜೆ ಸ್ಥಳ ಮಹಜರು ನಡೆಸಲು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಆರೋಪಿ ಪರಾರಿ ಆಗಲು ಯತ್ನಿಸಿದ್ದಾನೆ. ಆತ್ಮ ರಕ್ಷಣೆಗಾಗಿ ಮತಿನ್ ಮೇಲೆ ಡಿವೈಎಸ್ಪಿ ದಿನಕರ ಶೆಟ್ಟಿ ಗುಂಡು ಹಾರಿಸಿದ್ದಾರೆ. ಗಾಯಾಳು ಮತಿನ್ ನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಸೇರಿಸಿದ ಪೊಲೀಸರು ಚಿಕಿತ್ಸೆ ಕೊಡಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read