HomeKarnatakaರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರ ಸಚಿವ HDK ಕಿಡಿ

ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರ ಸಚಿವ HDK ಕಿಡಿ

ನವದೆಹಲಿ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ರಾಮನಗರದ ಇತಿಹಾಸ ಅವರಿಗೆ ಗೊತ್ತಿದೆಯಯಾ ಎಂದು ಪ್ರಶ್ನಿಸಿದ್ದಾರೆ. ಅವರಿಗೆ ರಾಮನಗರದ ಇತಿಹಾಸ ಗೊತ್ತಿದ್ದರೆ ಹೆಸರು ಬದಲಾವಣೆ ಮಾಡುತ್ತಿರಲಿಲ್ಲ. ರಾಮನಗರ ಜಿಲ್ಲೆಯ ಹೆಸರು ಇಟ್ಟಾಗ ಏಕೆ ವಿರೋಧಿಸಲಿಲ್ಲ? ವಿಧಾನಸಭೆಯಲ್ಲಿಯೂ ಅವರು ಮಾತನಾಡಲಿಲ್ಲ ಎಂದು ಹೇಳಿದ್ದಾರೆ.

ಜಿಲ್ಲೆಯ ಹೆಸರು ಬದಲಾವಣೆಗೆ ಅರ್ಜಿ ಕೊಟ್ಟವರು ಯಾರು? ಜಿಲ್ಲೆಯ ಹೆಸರು ಬದಲಿಸುವುದರಿಂದ ಏನು ಸಿಗುತ್ತದೆ? ರಾಮನಗರ ಈಗಾಗಲೇ ಅಭಿವೃದ್ಧಿಯಾಗಿದೆ. ಜಿಲ್ಲೆಯ ಹೆಸರು ಬದಲಿಸಿ ಭೂಮಿ ಬೆಲೆ ಹೆಚ್ಚಿಸಬೇಕಾ? ಕಾನೂನು ಮತ್ತು ಸುವ್ಯವಸ್ಥೆ ಹೇಗಿದೆ ನೋಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇಡದೆ ಏನು ಅಭಿವೃದ್ಧಿ ಮಾಡಿದರೆ ಏನು ಪ್ರಯೋಜನ ಬಂತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular