BREAKING NEWS: ಮತ್ತೊಂದು ದುರಂತ: ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು

ರಾಮನಗರ: ಹಾಸನದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಮೃತಪಟ್ಟಿದ್ದ ಘಟನೆ ಬೆನ್ನಲ್ಲೇ ಇದೀಗ ರಾಮನಗರದಲ್ಲಿಯೂ ಅಂತದ್ದೇ ಘಟನೆ ನಡೆದಿದೆ. ಈಜಲು ತ್ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿದ್ದಾರೆ.

ರಾಮನಗರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೆಟ್ಟದ ಮೇಲಿರುವ ತಗ್ಗು ಪ್ರದೇಶಕ್ಕೆ ಮಕ್ಕಳು ಈಜಲು ತೆರಳಿದ್ದರು. ಈ ವೇಳೆ ಮೂವರು ನೀರುಪಾಲಾಗಿದ್ದಾರೆ. ಅಗ್ನಿಶಮಕ ಸಿಬ್ಬಂದಿಗಳು ಮಕ್ಕಳ್ ಮೃತದೇಹಕ್ಕಾಗಿ ಹುಡುಕಾಟ ನಡೆಸಿದೆ.

ಶಾಲೆಗಳಿಗೆ ಬೇಸಿಗೆ ರಜೆ ಇರುವ ಹಿನ್ನೆಲೆಯಲ್ಲಿ ಮಕ್ಕಳು ಆಟವಾಡುತ್ತಾ ಕೆರೆಗಳಲ್ಲಿ ಈಜಲು ಹೋಗಿ ದುರಂತಕ್ಕೀಡಾಗುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ವಿಜಯಪುರ, ಹಾಸನ, ಇದೀಗ ರಾಮನಗರ ಸೇರಿದಂತೆ ಸಾಲು ಸಾಲು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ರಜಾ ದಿನಗಳನ್ನು ಕಳೆಯುತ್ತಿರುವ ಮಕ್ಕಳ ಆಟ, ಚಲನವಲನಗಳ ಮೇಲೆ ಪೋಷಕರು ನಿಗಾವಹಿಸಬೇಕು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read