HomeLatest Newsಪ್ರೀತಿಯ ಹೆಸರಲ್ಲಿ ವಂಚನೆ: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಯತ್ನ

ಪ್ರೀತಿಯ ಹೆಸರಲ್ಲಿ ವಂಚನೆ: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಯತ್ನ

ರಾಮನಗರ: ಪ್ರೀತಿ ಹೆಸರಲ್ಲಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಯುವಕನೊಬ್ಬ ಕೈಕೊಟ್ಟಿದ್ದು, ಮನನೊಂದ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.

26 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸುದವಳು. ರಾಮನಗರದ ತೆರಿಗೆದೊಡ್ಡಿ ಗ್ರಾಮದ ಯುವಕ ಅರುಣ್ ನಾಯ್ಕ್ ಎಂಬಾತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಪ್ರೀತಿ-ಪ್ರೇಮ ಎಂದು ಸುತ್ತಾಡಿದ್ದಲ್ಲದೇ ಆಕೆಯೊಂದಿಗೆ ದೈಹಿಕ ಸಂಪರ್ಕವನ್ನು ಬೆಳೆಸಿದ್ದ. ಈಗ ಮದುವೆಯಾಗದೇ ನಾಪತ್ತೆಯಾಗಿದ್ದಾನೆ.

ಕಳೆದ ಒಂದೂವರೆ ವರ್ಷಗಳಿಂದಲೂ ಯುವತಿಯ ಕುಟುಂಬದವರೂ ಮದುವೆಗೆ ಒಪ್ಪಿದ್ದರು. ಆದರೆ ಈಗ ಮದುವೆಯಾಗದೇ ಯುವತಿಗೆ ಕೈಕೊಟ್ಟು ಅರುಣ್ ನಾಯ್ಕ್ ಎಸ್ಕೇಪ್ ಆಗಿದ್ದಾನೆ. ಕೆಲ ದಿನಗಳ ಹಿಂದೆಯೇ ಸಂತ್ರಸ್ತ ಯುವತಿ ಅರುಣ್ ನಾಯ್ಕ್ ವಿರುದ್ಧ ದೂರು ನೀಡಿದ್ದಳು. ಆದಾಗ್ಯೂ ಈವರೆಗೂ ಆತನ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಇದರಿಂದ ಮನನೊಂದ ಯುವತಿ ಡೆತ್ ನೋಟ್ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೀವ್ರ ಅಸ್ವಸ್ಥಳಾಗಿದ್ದ ಯುವತಿಯನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular