BIG NEWS: ಒಂಟಿ ಸಲಗ ದಾಳಿಗೆ ವ್ಯಕ್ತಿ ಬಲಿ: ಮೃತರ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಲು ಡಿಸಿಎಂ ಸೂಚನೆ

ಬೆಂಗಳೂರು: ಒಂಟಿಸಲಗ ದಾಳಿಗೆ ರಾಮನಗರದ ಅರಳಿಕರೆದೊಡ್ಡಿ‌ ಗ್ರಾಮದಲ್ಲಿ 60 ವರ್ಷದ ತಿಮ್ಮಪ್ಪ ಎಂಬುವವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತೋಟದ ಮನೆಗೆ ತೆರಳಿದ್ದ ವೇಳೆ ಆನೆ ದಾಳಿಗೆ ಬಲಿಯಾಗಿದ್ದರು. ಈ ಪ್ರಕರಣ ಸಂಬಂಧ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಅರಣ್ಯ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಆನೆ ದಾಳಿಯಿಂದ ಮೃತಪಟ್ಟಿರುವ ತಿಮ್ಮಪ್ಪ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಅವರ ಮಗಳಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇನ್ನು ಗ್ರಾಮಸ್ಥರ ಬೇಡಿಕೆಯಂತೆ ಆ ಭಾಗದಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಮಾಡಿ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read