HomeKarnatakaBREAKING NEWS: ಯುವತಿಗೆ ಚಾಕು ಇರಿದು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು

BREAKING NEWS: ಯುವತಿಗೆ ಚಾಕು ಇರಿದು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು

ರಾಮನಗರ: ಅಪ್ರಾಪ್ತೆಗೆ ಚಾಕು ಇರಿದು ಆಕೆಯನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರದ ಐಬಿ ರಸ್ತೆಯಲ್ಲಿರುವ ಜ್ಯೂನಿಯರ್ ಕಾಲೇಜು ಬಳಿ ಈ ಘಟನೆ ನಡೆದಿದೆ. ಹಾಡ ಹಗಲೇ ದುಷ್ಕರ್ಮಿಗಳು ಯುವತಿಗೆ ಚಾಕು ಇರಿದು, ಆಕೆಯನ್ನು ಕಿಡ್ನ್ಯಾಪ್ ಮಾಡಿ ಇನೋವಾ ಕಾರಿನಲ್ಲಿ ಹೊತ್ತೊಯ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಹರಣವನ್ನು ತಪ್ಪಿಸಲು ಸ್ಥಳೀಯರು ಯತ್ನಿಸಿದ್ದಾರೆ. ಅಲ್ಲದೇ ಕಾರಿನ ಮೇಲೆ ಕಲ್ಲು ಎಸೆದಿದ್ದಾರೆ. ಆದರೆ ದುಷ್ಕರ್ಮಿಗಳು ಯುವತಿಯನ್ನು ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾರೆ.

ಯುವತಿಗೆ ಚಾಕುವಿನಿಂದ ಇರಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ರಕ್ತಚಲ್ಲಿದೆ. ದುಷ್ಕರ್ಮಿಗಳ ಕಾರನ್ನು ಪೊಲೀಸರು ಚೇಸ್ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular