ರಾಮನಗರ: ಪ್ರೀತಿಸಿ ವಿವಾಹವಾಗಿದ್ದ ವ್ಯಕ್ತಿಯೋರ್ವ ಹೆಂಡತಿಗೆ ಕಿರುಕುಳ ನೀಡಿ ಮನೆಯಿಂದಲೇ ಹೊರ ಹಾಕಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ನಡೆದಿದೆ.
ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮಾಲೀಕ ರೂಪೇಶ್ ವಿರುದ್ಧ ಪತ್ನಿಗೆ ಕಿರುಕುಳ ಆರೋಪ ಕೇಳಿಬಂದಿದೆ. ಒಂದು ವರ್ಷದ ಹಿಂದಷ್ಟೇ ರೂಪೇಶ್ ಪ್ರೀತಿ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದು, ಮದುವೆ ಬಳಿಕ ರೂಪೇಶ್ ಪತ್ನಿಗೆ ಕಿರುಕುಳ, ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.
ಅಲ್ಲದೇ ಕೆಲ ದಿನಗಳಿಂದ ಪತ್ನಿಯನ್ನು ಮನೆಯೊಳಗೆ ಸೇರಿಸುತ್ತಿಲ್ಲ ಎಂದು ಪತ್ನಿ ಆರೋಪಿಸಿದ್ದಾರೆ. ಪೊಲೀಸರಿಗೆ ದೂರು ನೀಡಿರುವ ಪ್ರೀತಿ, ಪತಿ ಒಡೆತನದ ಶಾಲೆಯ ಮುಂದೆ ನ್ಯಾಯಕ್ಕಾಗಿ ಒತ್ತಾಯಿಸಿ ಧರಣಿ ಕುಳಿತಿರುವ ಘಟನೆ ನಡೆದಿದೆ.

