HomeKarnatakaBREAKING: ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಆತ್ಮಹತ್ಯೆ

BREAKING: ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಆತ್ಮಹತ್ಯೆ

ರಾಮನಗರ: 5 ತಿಂಗಳ ಗರ್ಭಿಣಿಯೊಬ್ಬರು ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ರಾಮನಗರದ ವಡ್ಡರದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಕೌಟುಂಬಿಕ ಕಹದಿಂದ ಬೇಸತ್ತು ಗರ್ಭಿಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. 19 ವರ್ಷದ ನಯನಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 9 ತಿಂಗಳ ಹಿಂದೆ ಸುನೀಲ್ ಎಂಬುವವರನ್ನು ನಯನಾ ವಿವಾಹವಾಗಿದ್ದರು. ನಯನಾ 5 ತಿಂಗಳ ಗರ್ಭಿಣಿ.

ಪತಿ ಸುನೀಲ್, ಅತ್ತೆ-ಮಾವ ಕಿರುಕುಳ ನೀಡುತ್ತಿದ್ದರಂತೆ. ಮೃತ ನಯನಾ ಪೋಷಕರು ಕಿರುಕುಳದ ಆರೋಪ ಮಾಡಿದ್ದಾರೆ. ಇದೀಗ ಮನನೊಂದ ನಯನಾ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 19 ವರ್ಷದೊಳಗೇ ಮದುವೆಯಾಗಿದ್ದ ನಯನಾ. ಗರ್ಭಿಣಿ ಕೂಡ ಆಗಿದ್ದರು. ಆದರೆ ಮನೆಯಲ್ಲಿನ ಕೌಟುಂಬಿಕ ಕಲಹದಿಂದ ಬೇಸತ್ತು ಬದುಕನ್ನೇ ಅಂತ್ಯಗೊಳಿಸಿಕೊಂಡಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular