ಉಡುಪಿ: ಮಾಜಿ ಸಚಿವ ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ನಡೆದಿದೆ.
ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನೊಳಗಿದ್ದ ಮಾಜಿ ಸಚಿವ ರಮಾನಾಥ್ ರೈ ಅದೃಷ್ಟವಶಾತ್ ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಮಾನಾಥ್ ರೈ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರನ್ನೂ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆದ್ದಾರಿ ಕಾಮಗಾಅರಿ ಹಿನ್ನೆಲೆಯಲ್ಲಿ ಸಾಣೂರಿನಲ್ಲಿ ವಾಹನಗಳ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಈ ವೇಳೆ ಕಾರ್ಕಳಕ್ಕೆ ಬರುತ್ತಿದ್ದ ರಮಾಅನಾಅಥ ರೈ ಅವರ ಕಾರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಗೆ ಹೊರಟಿದ್ದ ಖಾಸಗಿ ಬಸ್ ಗಳ ನಡುವೆ ಡಿಕ್ಕಿಯಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಬಸ್ ನಲ್ಲಿದ್ದವರು ಕೂಡ ಸಣ್ಣಪುಟ್ಟ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ: ನಾಳೆ ಶೃಂಗೇರಿ ಬಂದ್
ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡಿನ ಜನರು ಮುಖ್ಯಮಂತ್ರಿ ಡಿ.ಕೆ.,ಶಿವಕುಮಾರ್ ಭರವಸೆ ಹೊರತಾಗಿಯೂ ಬಂದ್ ಗೆ ಕರೆ ಕೊಟ್ಟಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧಿಸಿ ನಾಳೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು ಬಂದ್ ಗೆ ಕರೆ ನೀಡಲಾಗಿದೆ.
ಸ್ವಯಂ ಪ್ರೇರಿತವಾಗಿ ಶೃಂಗೇರಿ ಬಂದ್ ಹಾಗೂ ಬೃಹತ್ ಪ್ರತಿಭಟನೆಗೆ ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಕರೆ ನೀಡಿದೆ. ವರಿ ಜಾರಿಯಾದರೆ ಮಲೆನಾಡಿಗರು ಜೀವಂತ ಶವದಂತೆ ಬದುಕುವ ಸ್ಥಿತಿ ಬರಬಹುದು ಎಂದು ಜನರು ಆತಂಕ ವ್ಯಕ್ತಪಡಿಸಿದ್ದಾರೆ.
ನಾಳೆ ಸೆ.21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ಉಭಯ ಸದನಗಳ ವಿಶೇಷ ಅಧಿವೇಶನ ಆರಂಭವಾಗಲಿದೆ. ವಿಶೇಷವಾಗಿ ಪಶ್ಚಿಮ ಘಟ್ಟದ ಕುರಿತು ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ವಿರುದ್ಧ ಈ ವಿಶೇಷ ಸದನದಲ್ಲಿ ಚರ್ಚೆಯಾಗಲಿದೆ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡಿನ ಜನರಲ್ಲಿ ಆತಂಕ ಮುಂದುವರಿದಿದ್ದು, ಸಿಎಂ ಭರವಸೆಯ ನಡುವೆಯೂ ನಾಳೆ ಶೃಂಗೇರಿ ಬಂದ್ಗೆ ಕರೆ ನೀಡಲಾಗಿದೆ. ರೈತ ಸಂಘಟನೆಗಳು, ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಸೇರಿದಂತೆ ಹಲವು ಸಂಘಟನೆಗಗಳು ಬಂದ್ಗೆ ಕರೆ ನೀಡಿದ್ದು, ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶೃಂಗೇರಿ ಸಂಪೂರ್ಣ ಸ್ತಬ್ಧವಾಗಲಿದೆ.

