ರಾಮನವಮಿಯಂದು ಪಾನಕ, ಮಜ್ಜಿಗೆ ಸೇವಿಸಿದ್ದ ಒಂದೇ ಗ್ರಾಮದ 45 ಜನರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ತುಮಕೂರು: ಶ್ರೀ ರಾಮನವಮಿಯಂದು ಪಾನಕ, ಮಜ್ಜಿಗೆ ಸೇವಿಸಿದ್ದ ಒಂದೇ ಗ್ರಾಮದ 45 ಜನರು ಅಸ್ವಸ್ಥರಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ರಾಮನವಮಿ ಹಿನ್ನೆಲೆಯಲ್ಲಿ ಗ್ರಾಮದ ಸುಬ್ರಹ್ಮಣ್ಯ ದೇಗುಲದಲ್ಲಿ ಪಾನಕ, ಮಜ್ಜಿಗೆ ಹಂಚಲಾಗಿತ್ತು. ನಿನ್ನೆ ಮಧ್ಯರಾತ್ರಿ ಬಳಿಕ ವಾಂತಿ-ಭೇದಿ ಶುರುವಾಗಿದ್ದು, ಗ್ರಾಮದ 45 ಜನರು ಅಸ್ವಸ್ಥರಾಗಿದ್ದಾರೆ.

ಅಸ್ವಸ್ಥರನ್ನು ಎಡೆಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಹಲವರನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read