ಗದಗ ಜಿಲ್ಲೆ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ರಾಮಣ್ಣ ಲಮಾಣಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ರಾಮಣ್ಣ ಲಮಾಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಅದೇ ರೀತಿ ಅಕ್ಟೋಬರ್ 20ರಂದು ಬಿಜೆಪಿ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಜೆಡಿಎಸ್ ಸೇರಿದ್ದರು.
ಸಿಎಂ ಸಿದ್ದರಾಮಯ್ಯ ಟ್ವೀಟ್
ಇತ್ತೀಚೆಗೆ ಈ ಬಗ್ಗೆ ಮಾಹಿತಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಬಿಜೆಪಿಯ ಮಾಜಿ ಶಾಸಕರಾದ ಮೂಡಿಗೆರೆಯ ಕುಮಾರಸ್ವಾಮಿ ಮತ್ತು ಶಿರಹಟ್ಟಿಯ ರಾಮಪ್ಪ ಲಮಾಣಿ ಅವರು ಇಂದು ನನ್ನನ್ನು ಭೇಟಿಯಾಗಿ ಸಮಾಲೋಚನೆ ನಡೆಸಿ, ನಂತರ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದರು ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದರು.
https://twitter.com/siddaramaiah/status/1712147426684129756?ref_src=twsrc%5Etfw%7Ctwcamp%5Etweetembed%7Ctwterm%5E1712147426684129756%7Ctwgr%5Ed183e898324edfae2bb65c03aebc5e1e823a9ac5%7Ctwcon%5Es1_&ref_url=https%3A%2F%2Fpolitical360.in%2Framanna-lamani-will-join-congress-today%2F