HomeLatest Newsವಿದೇಶದಲ್ಲೂ 'ರಾಮಾಯಣ' ಅಬ್ಬರ: ಅಂತರರಾಷ್ಟ್ರೀಯ ಮಟ್ಟದಲ್ಲಿ 50,000 ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಲಿರುವ ಮೊದಲ ಭಾರತೀಯ ಸಿನಿಮಾ!

ವಿದೇಶದಲ್ಲೂ ‘ರಾಮಾಯಣ’ ಅಬ್ಬರ: ಅಂತರರಾಷ್ಟ್ರೀಯ ಮಟ್ಟದಲ್ಲಿ 50,000 ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಲಿರುವ ಮೊದಲ ಭಾರತೀಯ ಸಿನಿಮಾ!

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ‘ರಾಮಾಯಣ ಪಾರ್ಟ್ 1’ ಸಿನಿಮಾ ಬಿಡುಗಡೆಗೂ ಮುನ್ನವೇ ಭಾರಿ ದಾಖಲೆ ಬರೆಯಲು ಸಜ್ಜಾಗಿದೆ. 2026ರ ನವೆಂಬರ್ 6 ರಂದು ದೀಪಾವಳಿ ಹಬ್ಬದ ಪ್ರಯುಕ್ತ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲಿರುವ ಈ ಚಿತ್ರವು, ಭಾರತದ ಹೊರಗೆ ಬರೊಬ್ಬರಿ 50,000ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ವರದಿಯಾಗಿದೆ. ಈ ಮೂಲಕ ವಿದೇಶಗಳಲ್ಲಿ ಅತಿ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗುತ್ತಿರುವ ಮೊದಲ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಹೊಸ ವರದಿಗಳ ಪ್ರಕಾರ, ‘ರಾಮಾಯಣ ಪಾರ್ಟ್ 1’ ಚಿತ್ರದ ವಿದೇಶಿ ವಿತರಣಾ ಹಕ್ಕುಗಳನ್ನು ಪ್ರಸಿದ್ಧ ಹಾಲಿವುಡ್ ಸಂಸ್ಥೆ ‘ಸೋನಿ ಪಿಕ್ಚರ್ಸ್’ ಪಡೆದುಕೊಂಡಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಈ ಮಹಾಕಾವ್ಯ ಆಧಾರಿತ ಚಿತ್ರದ ಇಂಗ್ಲಿಷ್ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. ನಟರು ಹಿಂದಿಯಲ್ಲಿ ಅಭಿನಯಿಸಿದ್ದರೂ, ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿ ಇಂಗ್ಲಿಷ್ ಸಂಭಾಷಣೆಗೆ ತಕ್ಕಂತೆ ಲಿಪ್ ಸಿಂಕ್ ಹೊಂದುವಂತೆ ಮಾಡಿರುವುದು ವಿದೇಶಿ ವೀಕ್ಷಕರನ್ನು ಬೆರಗುಗೊಳಿಸಿದೆ.

ಎರಡು ಭಾಗಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರ ಯೋಜನೆಗೆ ಒಟ್ಟಾರೆಯಾಗಿ ₹4,000 ಕೋಟಿ ಬಜೆಟ್ ವೆಚ್ಚ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಮೊದಲ ಭಾಗ ಈ ವರ್ಷದ ದೀಪಾವಳಿಗೆ ಬಿಡುಗಡೆಯಾದರೆ, ಎರಡನೇ ಭಾಗವು ಮುಂದಿನ ವರ್ಷದ ದೀಪಾವಳಿ ಹಬ್ಬದ ವೇಳೆಗೆ ತೆರೆಕಾಣಲಿದೆ. ಟ್ರೇಲರ್‌ಗೆ ಸೋಷಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಪ್ರದರ್ಶನದ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರದ ಗಳಿಕೆ ಮಾಡಲಿದೆ ಎಂದು ವಿಶ್ಲೇಷಕರು ಅಂದಾಜಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular