ವೀರಶೈವ ಲಿಂಗಾಯಿತ ಮಹಾಸಭಾ ಅಧಿವೇಶನದಲ್ಲಿ ಪಂಚಪೀಠ ಕಡೆಗಣನೆ: ರಂಭಾಪುರಿ ಶ್ರೀ ಬೇಸರ

ಕುರುಗೋಡು: ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ 24ನೇ ಮಹಾ ಅಧಿವೇಶನದಲ್ಲಿ ಪಂಚಪೀಠಗಳ ಕಡೆಗಣನೆಗೆ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಬೇಸರ ವ್ಯಕ್ತಪಡಿಸಿದ್ದಾರೆ.

ಸಿದ್ದರಾಂಪುರ ಗ್ರಾಮದಲ್ಲಿ ರಂಭಾಪುರಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಮಹೋತ್ಸವ ಹಾಗೂ ಜನಜಾಗೃತಿ ಧರ್ಮ ಸಂದೇಶ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಮಹಾಸಭಾ ಅಧಿವೇಶನದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯರ ಹೆಸರಾಗಲಿ ಅಥವಾ ಪಂಚಪೀಠಗಳ ಹೆಸರುಗಳಾಗಲಿ ಎಲ್ಲೂ ಕಾಣಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಜಾತಿ ಜಾತಿಗಳನ್ನು ತುಂಡು ಮಾಡುತ್ತಿರುವುದು ಕಂಡು ಬರುತ್ತಿದೆ. ವೀರಶೈವ ಪಂಚಪೀಠಗಳು ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು, ಅದನ್ನು ಮರೆತು ಮುಂದೆ ಹೋಗುತ್ತಿರುವುದು ಬೇಸರ ತರಿಸಿದೆ ಎಂದು ಹೇಳಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read