BIG NEWS: ಜನವರಿ 22ರಂದು ಅಯೋಧ್ಯೆಯಲ್ಲಿ ‘ರಾಮಲಲ್ಲಾ ಪ್ರಾಣಪ್ರತಿಷ್ಠೆ’; ಅಂದು ಪಾನಮುಕ್ತ ದಿನವಾಗಿ ಘೋಷಿಸಿದ ಛತ್ತೀಸ್ಗಢ ಸರ್ಕಾರ

ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ‘ರಾಮಲಲ್ಲಾ ಪ್ರಾಣಪ್ರತಿಷ್ಠೆ’ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಭರ್ಜರಿ ಸಿದ್ಧತೆ ನಡೆದಿದೆ. ದೇಶದಾದ್ಯಂತ ರಾಮಭಕ್ತರಲ್ಲಿ ಸಡಗರ ಸಂಭ್ರಮ ಮನೆ ಮಾಡಿದ್ದು, ಈ ಸಾರ್ಥಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

ಇದರ ಮಧ್ಯೆ ಛತ್ತೀಸ್ಗಡ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಳ್ಳಲು ಮುಂದಾಗಿದ್ದು, ರಾಮಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರ ಆ ದಿನವನ್ನು ರಾಜ್ಯದಲ್ಲಿ ಪಾನಮುಕ್ತ ದಿನ ಎಂದು ಘೋಷಿಸಲು ನಿರ್ಧರಿಸಲಾಗಿದೆ.

ಛತ್ತೀಸ್ಗಡ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಈ ವಿಷಯವನ್ನು ತಿಳಿಸಿದ್ದು, ಛತ್ತೀಸ್ಗಡ, ಶ್ರೀರಾಮನ ತಾಯಿಯ ತವರು ಆಗಿರುವುದು ನಮ್ಮ ಅದೃಷ್ಟ. ಜನವರಿ 22ರ ದಿನವನ್ನು ರಾಜ್ಯದ ಎಲ್ಲೆಡೆ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ ಹಾಗೂ ಎಲ್ಲಾ ಕಡೆ ಹಣತೆಗಳನ್ನು ಬೆಳಗಿಸಲಾಗುತ್ತದೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read