HomeIndiaBREAKING: 'ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ಅಭಿವೃದ್ಧಿ' ಪ್ರತಿಜ್ಞೆ ಮಾಡಿದ್ದ ಬಿಜೆಪಿ ನಾಯಕ ಕ್ಷಮೆಯಾಚನೆ

BREAKING: ‘ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ಅಭಿವೃದ್ಧಿ’ ಪ್ರತಿಜ್ಞೆ ಮಾಡಿದ್ದ ಬಿಜೆಪಿ ನಾಯಕ ಕ್ಷಮೆಯಾಚನೆ

ನವದೆಹಲಿ: ಪ್ರಿಯಾಂಕಾ ಗಾಂಧಿ ಕೆನ್ನೆಯ ರೀತಿ ರಸ್ತೆಗಳನ್ನು ಅಭಿವೃದ್ಧಿಪಡಿಸುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿಯ ಹಿರಿಯ ನಾಯಕ ಮತ್ತು ಕಲ್ಕಾಜಿ ಪಕ್ಷದ ಅಭ್ಯರ್ಥಿ ರಮೇಶ್ ಬಿಧುರಿ ಅವರು ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ.

ಮುಂದಿನ ತಿಂಗಳು ದೆಹಲಿಯಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ “ಕೆನ್ನೆ” ಯಂತೆ ಕ್ಷೇತ್ರದಲ್ಲಿ ಸುಗಮ ರಸ್ತೆಗಳನ್ನು ಅಭಿವೃದ್ಧಿಪಡಿಸುವುದಾಗಿ ಹೇಳಿದ್ದರು.

ಓಖ್ಲಾ ಮತ್ತು ಸಂಗಮ್ ವಿಹಾರ್‌ನಲ್ಲಿ ನಾವು ರಸ್ತೆಗಳನ್ನು ಮಾಡಿದಂತೆಯೇ, ಕಲ್ಕಾಜಿಯ ಎಲ್ಲಾ ರಸ್ತೆಗಳನ್ನು ಪ್ರಿಯಾಂಕಾ ಗಾಂಧಿಯವರ ಕೆನ್ನೆಯಂತೆ ಮಾಡುತ್ತೇವೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಅವರು ನೀಡಿದ ಹೇಳಿಕೆಯ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲ್ಕಾಜಿ ಕಾಂಗ್ರೆಸ್ ಅಭ್ಯರ್ಥಿ ಮತ್ತು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಅವರು, ಅಸಭ್ಯ ಭಾಷೆಯಲ್ಲಿ ಮತ್ತೊಮ್ಮೆ ಮಹಿಳೆಯರನ್ನು “ಅವಮಾನಿಸಿದ್ದಾರೆ” ಎಂದು ಆರೋಪಿಸಿದ್ದರು. ಬಿಧುರಿ ಅವರ ಹೇಳಿಕೆಗೆ ಸಾರ್ವಜನಿಕ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು.

ವಿವಾದ ಉಲ್ಬಣಗೊಳ್ಳುತ್ತಿರುವುದನ್ನು ಗಮನಿಸಿದ ಬಿಧುರಿ ಅವರು ಕ್ಯಾಮರಾ ಮುಂದೆ ಕ್ಷಮೆಯಾಚಿಸಿದರು. ಯಾರ ಭಾವನೆಗಳನ್ನು ನೋಯಿಸುವ ಉದ್ದೇಶವಿಲ್ಲ. ಲಾಲು ಯಾದವ್ ಅವರ ಹಿಂದಿನ ಹೇಳಿಕೆಗಳಿಂದ ನಾನು ಉಲ್ಲೇಖ ಪಡೆದು ಹೇಳಿಕೆ ನೀಡಿದ್ದೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ, ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನನ್ನ ಮಾತುಗಳನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular