ಅಡ್ವಾಣಿಯಂತವರೇ ತ್ಯಾಗ ಮಾಡಿದ್ದಾರೆ, ಶೆಟ್ಟರ್ ಅವರೇನೂ ದೊಡ್ಡ ನಾಯಕರಲ್ಲ: ರಮೇಶ ಜಾರಕಿಹೊಳಿ ವಾಗ್ದಾಳಿ

ಬೆಳಗಾವಿ: ಬಿಜೆಪಿಯಲ್ಲಿ ಎಲ್.ಕೆ. ಅಡ್ವಾಣಿ ಅವರಂತಹ ದೊಡ್ಡ ನಾಯಕರೇ ಬಹುದೊಡ್ಡ ತ್ಯಾಗಗಳನ್ನು ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಎಲ್ಲಾ ಹುದ್ದೆಗಳನ್ನು ಅನುಭವಿಸಿದ್ದರೂ ಬಿಜೆಪಿ ತೊರೆದಿದ್ದಾರೆ. ಅವರೇನೂ ದೊಡ್ಡ ನಾಯಕರಲ್ಲ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯ ಧರ್ಮನಾಥ ಭವನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಅಧಿಕಾರ ಅನುಭವಿಸಿದ ಕೆಲವರು ಬಿಜೆಪಿ ತೊರೆದು ಪಕ್ಷದ ವಿರುದ್ಧವೇ ಮಾತನಾಡುತ್ತಿದ್ದಾರೆ. ಹೋಗುವವರು ಹೋಗಲಿ, ಪಕ್ಷ ಸ್ವಚ್ಛ ಆಗುತ್ತದೆ ಎಂದು ಹೇಳಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಂಜಯ್ ಪಾಟೀಲ್ ಮತ್ತು ಧನಂಜಯ ಜಾಧವ್ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಮೂರನೇಯವರಿಗೆ ಬಿಜೆಪಿ ಟಿಕೆಟ್ ನೀಡಿದ್ದರೂ ಮನಪೂರ್ವಕವಾಗಿ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಅವರಿಬ್ಬರೂ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಬೇಕು. ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಬೇಕು ಎಂದು ಹೇಳಿದ್ದಾರೆ.

ಅಥಣಿ ಕ್ಷೇತ್ರದಲ್ಲಿ ಹೆಚ್ಚಿನ ಒತ್ತು ನೀಡಿ ಬಿಜೆಪಿ ಬಾವುಟ ಹಾರಿಸಬೇಕು ಎನ್ನುವ ದೃಢ ಸಂಕಲ್ಪ ಮಾಡಿದ್ದೇನೆ. ಬೆಳಗಾವಿ ಜಿಲ್ಲೆಯ 15ಕ್ಕೂ ಹೆಚ್ಚು ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲು ದೃಢಸಂಕಲ್ಪ ಮಾಡಬೇಕು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read