HomeKarnatakaಬಿಜೆಪಿ ನಾಯಕರಿಗೆ ಸಾಹುಕಾರ್ ಶಾಕ್: ಅಥಣಿಯಲ್ಲಿ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ನಾನೂ ಸ್ಪರ್ಧಿಸಲ್ಲ: ರಮೇಶ್ ಜಾರಕಿಹೊಳಿ...

ಬಿಜೆಪಿ ನಾಯಕರಿಗೆ ಸಾಹುಕಾರ್ ಶಾಕ್: ಅಥಣಿಯಲ್ಲಿ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ನಾನೂ ಸ್ಪರ್ಧಿಸಲ್ಲ: ರಮೇಶ್ ಜಾರಕಿಹೊಳಿ ಹೊಸ ಬಾಂಬ್

ವಿಜಯಪುರ: ಅಥಣಿ ವಿಧಾನಸಭಾ ಕ್ಷೇತ್ರದಿಂದ ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ನಾನು ಕೂಡ ಗೋಕಾಕ್ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸಿದ್ದ ರಮೇಶ್ ಜಾರಕಿಹೊಳಿ ಸುದ್ದಿಗಾರರೊಂದಿಗೆ ಮಾತನಾಡಿ, ಅಥಣಿ ಕ್ಷೇತ್ರದಿಂದ ಹಾಲಿ ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ನೀಡದಿದ್ದರೆ ನಾನು ಕೂಡ ಗೋಕಾಕ್ ನಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಅಥಣಿ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಥಣಿ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ರಮೇಶ್ ಜಾರಕಿಹೊಳಿ ಬೆಂಬಲಿಗರಾಗಿದ್ದಾರೆ. 2018 ರಲ್ಲಿ ಬಿಜೆಪಿಯ ಲಕ್ಷ್ಮಣ ಸವದಿ ಅವರನ್ನು ಮಣಿಸಿ ಕಾಂಗ್ರೆಸ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2019ರಲ್ಲಿ ರಮೇಶ ಜಾರಕಿಹೊಳಿಯವರೊಂದಿಗೆ ಬಿಜೆಪಿ ಸೇರಿದ್ದ ಮಹೇಶ್ ಕುಮಟಳ್ಳಿ ಉಪಚುನಾವಣೆಯಲ್ಲಿ ಜಯಗಳಿಸಿದ್ದರು. ಈ ಬಾರಿ ಅಥಣಿ ಬಿಜೆಪಿ ಟಿಕೆಟ್ ಗೆ ಲಕ್ಷ್ಮಣ ಸವದಿ ಕಣ್ಣಿಟ್ಟಿದ್ದಾರೆ. ಕುಮಟಳ್ಳಿ ಅವರಿಗೆ ಟಿಕೆಟ್ ನೀಡಬೇಕೆಂದು ರಮೇಶ್ ಜಾರಕಿಹೊಳಿ ಪಟ್ಟು ಹಿಡಿದು ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular