HomeKarnatakaಮಹೇಶ ಕುಮಟಳ್ಳಿ, ಶ್ರೀಮಂತ್ ಪಾಟೀಲ್ ಸೇರಿ ಬಿಜೆಪಿ ಸೇರಿದ ಎಲ್ಲರಿಗೂ ಟಿಕೆಟ್: ರಮೇಶ್ ಜಾರಕಿಹೊಳಿ

ಮಹೇಶ ಕುಮಟಳ್ಳಿ, ಶ್ರೀಮಂತ್ ಪಾಟೀಲ್ ಸೇರಿ ಬಿಜೆಪಿ ಸೇರಿದ ಎಲ್ಲರಿಗೂ ಟಿಕೆಟ್: ರಮೇಶ್ ಜಾರಕಿಹೊಳಿ

ಅಥಣಿ ಕ್ಷೇತ್ರದ ಟಿಕೆಟ್ ಗಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತ್ತು ಶಾಸಕ ಮಹೇಶ ಕುಮಟಳ್ಳಿ ಅವರ ನಡುವೆ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ನನಗೆ ವಿಶ್ವಾಸವಿದೆ. ಮಹೇಶ್ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗುತ್ತದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ಶಿನೋಳಿ ಗ್ರಾಮದಲ್ಲಿ ಅವರು ಮಾತನಾಡಿದರು. ಕೆಲವೊಂದು ವಿಷಯಗಳನ್ನು ಬಹಿರಂಗಪಡಿಸಲು ಆಗುವುದಿಲ್ಲ. ಶ್ರೀಮಂತ ಪಾಟೀಲ್ ಸೇರಿದಂತೆ ಬಿಜೆಪಿ ಸೇರಿದ ಎಲ್ಲರಿಗೂ ಟಿಕೆಟ್ ಸಿಗುತ್ತದೆ. ಬಿಜೆಪಿ ಸೇರಿದ ಎಲ್ಲರಿಗೂ ಹೈಕಮಾಂಡ್ ಆಶೀರ್ವಾದ ಮಾಡುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಕ್ಷ್ಮಣ ಸವದಿ ಏಕೆ ಹತಾಶರಾಗಿ ಮಾತನಾಡುತ್ತಿದ್ದರೋ ಅರ್ಥವಾಗುತ್ತಿಲ್ಲ. ನಾನು ಹಾಗೂ ಲಕ್ಷ್ಮಣ ಸವದಿ ಸಣ್ಣ ಗಿಡ. ರಾಷ್ಟ್ರೀಯ ನಾಯಕರು ಹೆಮ್ಮರ. ಅವರು ನಿರ್ಣಯ ಮಾಡುತ್ತಾರೆ. ಯಾಕೆ ಇಷ್ಟು ಚಡಪಡಿಸುತ್ತಿದ್ದೀಯಾ ಲಕ್ಷ್ಮಣ ಅಣ್ಣ ಆರಾಮಾಗಿರು ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular