HomeKarnatakaಸಿಡಿ ಕೇಸ್ ಹಿನ್ನಲೆ ನಿಮ್ಮ ಬದಲು ಪುತ್ರನಿಗೆ ಟಿಕೆಟ್ ಎಂದ ಬಿಜೆಪಿ ಹೈಕಮಾಂಡ್ ಗೇ ರಮೇಶ್...

ಸಿಡಿ ಕೇಸ್ ಹಿನ್ನಲೆ ನಿಮ್ಮ ಬದಲು ಪುತ್ರನಿಗೆ ಟಿಕೆಟ್ ಎಂದ ಬಿಜೆಪಿ ಹೈಕಮಾಂಡ್ ಗೇ ರಮೇಶ್ ಜಾರಕಿಹೊಳಿ ಶಾಕ್…?

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತೆ ರಮೇಶ್ ಜಾರಕಿಹೊಳಿಯವರೊಂದಿಗೆ ಹೈಕಮಾಂಡ್ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಸಿಡಿ ಪ್ರಕರಣ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಹೈಕಮಾಂಡ್ ನಾಯಕರು ಸಲಹೆ ನೀಡಿದ್ದು, ನಿಮ್ಮ ಪುತ್ರನನ್ನು ಗೋಕಾಕ್ ನಿಂದ ಕಣಕ್ಕಿಳಿಸಿ ಗೆಲ್ಲಿಸಿಕೊಳ್ಳಿ. ಚುನಾವಣಾ ರಾಜಕೀಯದಿಂದ ದೂರವಿರಿ ಎಂದು ಬಿಜೆಪಿ ಹೈಕಮಾಂಡ್ ರಮೇಶ್ ಜಾರಕಿಹೊಳಿ ಅವರಿಗೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಇದಕ್ಕೆ ಒಪ್ಪದೇ, ಈ ಬಾರಿ ಕಣಕ್ಕೆ ಇಳಿಯಲೇಬೇಕು ಎಂದು ಜಾರಕಿಹೊಳಿ ಪಟ್ಟು ಹಿಡಿದಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿಯೇ ನಿವೃತ್ತಿ ಹೊಂದುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಹೀಗಾಗಿ ಗೋಕಾಕ್ ವಿಧಾನಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರವೀಗ ಭಾರಿ ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular