HomeKarnatakaBREAKING NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲು

BREAKING NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲು

ಬೆಳಗಾವಿ: ಮಾಜಿ ಸಚಿವ ರಮೇಶ್ ಜರಕಿಹೊಳಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜಾರಕಿಹೊಳಿ ವಿರುದ್ಧ 420 ಕೇಸ್ ದಾಖಲಿಸಲಾಗಿದೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ರಾಜ್ಯ ಸಹಕಾರಿ ಅಫೆಕ್ಸ್ ಬ್ಯಾಂಕ್ ನಿಂದ ಶುಗರ್ ಫ್ಯಾಕ್ಟರಿ ಹೆಸರಲ್ಲಿ 439 ಕೋಟಿ 7 ಲಕ್ಷ ರೂಪಾಯಿ ಸಾಲ ಪಡೆದಿದ್ದು, ಸಾಲ ಮರುಪಾವತಿ ಮಾಡದೇ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿಯ ಗೋಕಾಕ್ ನಲ್ಲಿರುವ ಸೌಭಾಗ್ಯಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿ ಹೆಸರಲ್ಲಿ ಕಾರ್ಖಾನೆ ವಿಸ್ತರಣೆ ಹಾಗೂ ನಿರ್ವಹಣೆಗಾಗಿ ಸಾಲ ಪಡೆದಿದ್ದು, ಮರುಪಾವತಿ ಮಾಡಿಲ್ಲ. ಬ್ಯಾಂಕ್ ಗೆ ವಂಚಿಸುವ ಉದ್ದೇಶದಿಂದಲೇ ಆಡಳಿತ ಮಂಡಳಿಯಿಂದಲೂ ಮಾಹಿತಿ ನೀಡದೇ ಹೊರ ಬಂದಿದ್ದಾರೆ ಎಂದು ಆರೋಪಿಸಿ ರಮೇಶ್ ಜಾರಕಿಹೊಳಿ, ವಸಂತ್ ಪಾಟೀಲ್, ಶಂಕರ್ ಪಾವಡೆ ಹಾಗೂ ಇಬ್ಬರು ಪದಾಧಿಕಾರಿಗಳ ವಿರುದ್ಧ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ವಿವಿಪುರಂ ಠಾಣೆಯಲ್ಲಿ ದೂರು ನೀಡಿದ್ದು, ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

2013ರಿಂದ 2017ರವರೆಗೆ 232 ಕೋಟಿ 88 ಲಕ್ಷ ಸಾಲ ಪಡೆದಿದ್ದು, 2023ವರೆಗೆ ಒಟ್ಟು 439 ಕೋಟಿ 7 ಲಕ್ಷ ಸಾಲದ ಮೊತ್ತ ಬಾಕಿ ಇದ್ದು, ಬ್ಯಾಂಕ್ ಗೆ ಸಾಲ ಮರುಪಾವತಿ ಮಾಡದೇ ಮೋಸ ಮಾಡಿದ್ದಾರೆ. ಅಲ್ಲದೇ ಯಾವುದೇ ಮಾಹಿತಿಯನ್ನೂ ನೀಡದೇ ಆಡಳಿತ ಮಂಡಳಿ ಹುದ್ದೆಯಿಂದಲೂ ಹೊರಬಂದಿದ್ದಾರೆ ಎಂದು ಆರೋಪಿಸಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular