HomeKarnatakaಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಈ ಮಹಾನುಭಾವ: ರಮೇಶ ಜಾರಕಿಹೊಳಿ ಬಾಂಬ್

ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದೇ ಈ ಮಹಾನುಭಾವ: ರಮೇಶ ಜಾರಕಿಹೊಳಿ ಬಾಂಬ್

ಬೆಳಗಾವಿ: ಯಡಿಯೂರಪ್ಪನವರ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತಂದಿದ್ದೇ ಲಕ್ಷ್ಮಣ ಸವದಿ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಆರೋಪಿಸಿದ್ದಾರೆ.

ಅಥಣಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರಿಗೆ ಲಕ್ಷ್ಮಣ ಸವದಿಯನ್ನು ಉಪಮುಖ್ಯಮಂತ್ರಿ ಮಾಡುವ ಮನಸ್ಸು ಇರಲಿಲ್ಲ. ಪಕ್ಷದ ಹಿರಿಯ ಮುಖಂಡರ ಸಹಾಯ ಪಡೆದುಕೊಂಡ ಸವದಿ ಉಪಮುಖ್ಯಮಂತ್ರಿ ಸ್ಥಾನ ಪಡೆದುಕೊಂಡಿದ್ದ. ನಂತರ ಯಡಿಯೂರಪ್ಪನವರ ಮುಖ್ಯಮಂತ್ರಿ ಸ್ಥಾನಕ್ಕೆ ತಂದಿದ್ದೆ ಈ ಮಹಾನುಭಾವ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ವರಿಷ್ಠರಿಗೆ ಯಡಿಯೂರಪ್ಪನವರ ಬಗ್ಗೆ ತಪ್ಪು ಕಲ್ಪನೆ ಬರುವಂತೆ ಹೇಳುವಲ್ಲಿ ಲಕ್ಷ್ಮಣ ಸವದಿ ಪ್ರಮುಖ ಪಾತ್ರ ವಹಿಸಿದ್ದ. ಈ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿಯನ್ನು ಸೋಲಿಸಿ ಮನೆಗೆ ಕಳುಹಿಸಲು ನಾನು ಸಿದ್ಧವಾಗಿದ್ದೇನೆ ಎಂದು ಜಾರಕಿಹೊಳಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular