HomeKarnatakaBIG NEWS: ವಿಜಯೇಂದ್ರ ಬಿಜೆಪಿ ಅಧ್ಯಕ್ಷನಾಗಿರುವವರೆಗೂ ಪ್ರಚಾರಕ್ಕೆ ಹೋಗಲ್ಲ: ಮತ್ತೆ ಗುಡುಗಿದ ರಮೇಶ್ ಜಾರಕಿಹೊಳಿ

BIG NEWS: ವಿಜಯೇಂದ್ರ ಬಿಜೆಪಿ ಅಧ್ಯಕ್ಷನಾಗಿರುವವರೆಗೂ ಪ್ರಚಾರಕ್ಕೆ ಹೋಗಲ್ಲ: ಮತ್ತೆ ಗುಡುಗಿದ ರಮೇಶ್ ಜಾರಕಿಹೊಳಿ

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ವಿರುದ್ಧ ಮತ್ತೆ ಬಹಿರಂಗ ವಾಗ್ದಾಳಿ ನಡೆಸಿರುವ ಮಾಜಿ ಸಚಿವ, ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ, ವಿಜಯೇಂದ್ರ ಅಧ್ಯಕ್ಷ ಎಂದು ಒಪ್ಪಲ್ಲ ಎಂದಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ವಿಜಯೇಂದ್ರ ಅಧ್ಯಕ್ಷನಾಗಿರುವವರೆಗೂ ನಾನು ಚುನಾವಣಾ ಪ್ರಚಾರಕ್ಕೆ ಹೋಗಲ್ಲ. ಅವರನ್ನು ರಾಜ್ಯಾಧ್ಯಕ್ಷ ಎಂದು ನಾನು ಒಪ್ಪಿಲ್ಲ, ಒಪ್ಪುವುದೂ ಇಲ್ಲ ಎಂದರು.

ವಿಜಯೇಂದ್ರ ಸ್ಥಾನಮಾನದ ಬಗ್ಗೆ ನಾನು ವಿರೋಧ ಮಾಡಿಲ್ಲ. ಆದರೆ ರಾಜ್ಯಾಧ್ಯಕ್ಷ ಎಂದು ನಾನು ಒಪ್ಪುವುದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular