HomeKarnatakaBIG NEWS: ಡಿಸಿಎಂ ವಿರುದ್ಧ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ

BIG NEWS: ಡಿಸಿಎಂ ವಿರುದ್ಧ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಒಳ್ಳೆಯವರೇ ಆದರೆ 2018ರಲ್ಲಿ ಇದ್ದಂತೆ ಈಗಿಲ್ಲ ಎಂದು ಮಾಜಿ ಸಚಿವ ರಮೇಶ್ ಜರಕಿಹೊಳಿ ಸಿಎಂ ಸಿದ್ದರಾಮಯ್ಯ ಅವರನ್ನು ಶ್ಲಾಘಿಸುತ್ತಾ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯ ಕಾಗವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ ಬಹಳ ಒಳ್ಳೆಯವರು. ಆದರೆ ಈಗ ಅವರು ಬದಲಾಗಿದ್ದಾರೆ. ಕೊತ್ವಾಲ್ ಶಿಷ್ಯ ಡಿಸಿಎಂ ಆಗಿದ್ದಾರೆ ಹೀಗಾಗಿ ಸಿದ್ದರಾಮಯ್ಯನವರಿಗೆ ಬೆಲೆ ಇಲ್ಲ. ಕೊತ್ವಾಲ್ ಶಿಷ್ಯ ಸಿಎಂ ಆಗಿದ್ದರೆ ನಮ್ಮ ಆಸ್ತಿ ಅವರ ಹೆಸರಿಗೆ ಆಗುತ್ತಿತ್ತು. ದೇವರು ದೊಡ್ಡವನು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.

ಸೌಭಾಗ್ಯಲಕ್ಷ್ಮಿ ಶುಗರ್ಸ್ ಕಾರ್ಖಾನೆ ಹೆಸರಲ್ಲಿ ಸಾಲ ಪಡೆದ ವಿಚಾರವಾಗಿ ವಂಚನೆ ಪ್ರಕರಣ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ಕೊತ್ವಾಲ್ ಶಿಷ್ಯ ನನ್ನ ವಿರುದ್ಧ 420 ಕೇಸ್ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular