HomeKarnatakaಚುನಾವಣೆ ಬಳಿಕ ರಾಜ್ಯ ಸರ್ಕಾರ ಬದಲಾವಣೆ: ರಮೇಶ ಜಾರಕಿಹೊಳಿ

ಚುನಾವಣೆ ಬಳಿಕ ರಾಜ್ಯ ಸರ್ಕಾರ ಬದಲಾವಣೆ: ರಮೇಶ ಜಾರಕಿಹೊಳಿ

ಬೆಳಗಾವಿ: ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳು ಬರುತ್ತವೆ. ಚುನಾವಣೆಯ ನಂತರ ರಾಜ್ಯ ಸರ್ಕಾರ ಬದಲಾವಣೆಯಾಗುತ್ತದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಗುಂಗಿನಲ್ಲಿದ್ದಾರೆ. ಒಂದು ಕಿಲೋಮೀಟರ್ ರಸ್ತೆ ಕೂಡ ಅಭಿವೃದ್ಧಿಪಡಿಸಲು ಅವರಿಂದ ಸಾಧ್ಯವಾಗಿಲ್ಲ ಎಂದು ಟೀಕಿಸಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿದ ನಂತರ ರಾಜ್ಯ ಸರ್ಕಾರ ಬದಲಾಗಲಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದ್ದರೆ ಅಭಿವೃದ್ಧಿಗೆ ಸಹಾಯಕವಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲಿನಂತಿಲ್ಲ, ಅವರಲ್ಲಿ ತತ್ವ ಸಿದ್ಧಾಂತ ಉಳಿದಿಲ್ಲ. ಬೆಂಗಳೂರಿನ ವ್ಯಕ್ತಿಗಳ ಕೈಯಲ್ಲಿ ಸಿಕ್ಕ ಸಿದ್ದರಾಮಯ್ಯ ಏನೂ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಆದರೆ, ವೈಯಕ್ತಿಕವಾಗಿ ಎಂದಿಗೂ ಸಿದ್ದರಾಮಯ್ಯನವರೇ ನಮ್ಮ ನಾಯಕರು. ನಾನು ಅವರ ಅಭಿಮಾನಿಯಾಗಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular