HomeKarnatakaBIG NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾದ ಎಂಎಲ್ ಸಿ ಸಿ.ಪಿ ಯೋಗೇಶ್ವರ್; ಕುತೂಹಲ...

BIG NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾದ ಎಂಎಲ್ ಸಿ ಸಿ.ಪಿ ಯೋಗೇಶ್ವರ್; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಹಸ್ತ ಭಾರಿ ಚರ್ಚೆಯಲ್ಲಿರುವಾಗಲೇ ಎಂಎಲ್ ಸಿ ಸಿ.ಪಿ.ಯೋಗೇಶ್ವರ್, ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಸಿ.ಪಿ.ಯೋಗೇಶ್ವರ್ ಹಾಗೂ ರಮೇಶ್ ಜಾರಕಿಹೊಳಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ವಲಸಿಗ ಶಾಸಕರು ಮರಳಿ ಕಾಂಗ್ರೆಸ್ ಸೇರ್ಪಡೆಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿರುವ ನಡುವೆಯೇ ರಮೇಶ್ ಜಾರಕಿಹೊಳಿ ಹಾಗೂ ಸಿ.ಪಿ.ಯೋಗೇಶ್ವರ್ ಅವರ ಭೇಟಿ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ 17 ಶಾಸಕರು ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಪತನಗೊಳಿಸಿದ್ದರು. ಬಳಿಕ ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿದ್ದರು. ಅಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಶಾಸಕರು ಈಗ ಬಿಜೆಪಿ ತೊರೆಯಲು ಮುಂದಾಗಿದ್ದು, ಮರಳಿ ಕಾಂಗ್ರೆಸ್ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular