ಬೆಳಗಾವಿ: ಜಾತ್ರೆಯಲ್ಲಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಪ್ರಕರಣ ದಾಖಲಾಗಿದೆ.
ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಲಕ್ಷ್ಮೀದೇವಿ ಜಾತ್ರೆ ನಡೆಯುತ್ತಿದ್ದು, ಈ ವೇಳೆ ಸಂತೋಷ್ ಜಾರಕಿಹೊಳಿ ಸಾರ್ವಜನಿಕರ ಮಧ್ಯೆ ಕೈಯಲ್ಲಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಣೆ ನಡೆಸಿದ್ದಾರೆ. ಪೊಲೀಸರ ಸಮ್ಮುಖದಲ್ಲಿಯೇ ಶಾಸಕನ ಪುತ್ರ ಹುಚ್ಚಾಟ ಮೆರೆದಿದ್ದಾನೆ ಎನ್ನಲಾಗಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಘಟನೆ ಬೆನ್ನಲ್ಲೇ ಸಂತೋಷ್ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.