HomeKarnatakaBIG NEWS: ಸಂಸದ ರಮೇಶ್ ಜಿಗಜಿಣಗಿಗೆ ಮತ್ತೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

BIG NEWS: ಸಂಸದ ರಮೇಶ್ ಜಿಗಜಿಣಗಿಗೆ ಮತ್ತೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ವಿಜಯಪುರ: ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ರಮೇಶ್ ಜಿಗಜಿಣಗಿ ಅವರನ್ನು ತಡರಾತ್ರಿ ಬೆಳಗಾವಿಯ ಕೆ ಎಸ್ ಇ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಕಳೆದ ತಿಂಗಳು ವಿಜಯಪುರದಿಂದ ಬಾಗಲಕೋಟೆಗೆ ತೆರಳುತ್ತಿದ್ದ ವೇಳೆ ರಮೇಶ್ ಜಿಗಜಿಣಗಿಗೆ ದಿಢೀರ್ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದ ರಮೇಶ್ ಜಿಗಜಿಣಗಿ ಇದೀಗ ಮತ್ತೆ ಅನಾರೋಗ್ಯಕ್ಕೀಡಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular