HomeKarnatakaBIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಉಗ್ರರ ಬಂಧನ; NIA ಹಾಗೂ ಕರ್ನಾಟಕ...

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಉಗ್ರರ ಬಂಧನ; NIA ಹಾಗೂ ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘಿಸಿದ ಸಿಎಂ

ಮೈಸೂರು: ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್ಐಎ ತಂಡ ಮತ್ತು ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮತನಡಿದ ಸಿಎಂ ಸಿದ್ದರಾಮಯ್ಯ, ಆರೋಪಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಬೆಂಗಳೂರಿಗೆ ಕರೆ ತರಲಾಗಿದ್ದು, ಹೆಚ್ಚಿನ ವಿವರ ಪಡೆಯಲಾಗುವುದು ಎಂದರು.

ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್ ಹುಸೇನ್ ಶಾಜಿಬ್ ಹಾಗೂ ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಎನ್ಐಎ ಬಂಧಿಸಿದ್ದು, ಉಗ್ರರ ಬಳಿ ಕರ್ನಾಟಕದ ಇಬ್ಬರ ನಕಲಿ ಆಧಾರ್ ಕಾರ್ಡ್ ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular