BREAKING NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಬಂಧಿತ ಇಬ್ಬರು ಉಗ್ರರು NIA ಕಸ್ಟಡಿಗೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಂಧಿತ ಇಬ್ಬರು ಉಗ್ರರನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐ ಎ) ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆದಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಾಂಬರ್ ಮುಸ್ಸಾವೀರ್ ಹುಸೇನ್ ಶಾಜಿಬ್ ಹಾಗೂ ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಎನ್ ಐಎ ಅಧಿಕಾರಿಗಳು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದು, ಬೆಂಗಳೂರಿಗೆ ಕರೆ ತಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಎನ್ ಐಎ ಅಧಿಕಾರಿಗಳು, ಇಬ್ಬರು ಉಗ್ರರನ್ನು ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ ಎನ್ ಐಎ ಕೋರ್ಟ್ ನ ನ್ಯಾಯಾಧೀಶರ ಮನೆಯಲ್ಲಿ ಜಡ್ಜ್ ಮುಂದೆ ಹಾಜರು ಪಡಿಸಿದರು. ಈ ವೇಳೆ ಹೆಚ್ಚಿನ ತನಿಖೆಗಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿದರು.

ಎನ್ ಐಎ ಅಧಿಕರಿಗಳ ಮನವಿ ಪುರಸ್ಕರಿಸಿದ ನ್ಯಾಯಾಧೀಶರು ಬಂಧಿತ ಇಬ್ಬರು ಉಗ್ರರನ್ನು 10 ದಿನಗಳ ಕಾಲ ಎನ್ ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read