HomeKarnatakaBREAKING NEWS: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ ನಾಲ್ಕು ಕಡೆ NIA ದಾಳಿ

BREAKING NEWS: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ ನಾಲ್ಕು ಕಡೆ NIA ದಾಳಿ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎಂದು ತ್ತಿಳಿದುಬಂದಿದೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರು ಮಾತ್ರವಲ್ಲ ಕೊಯಮತ್ತೂರ್ ನಲ್ಲಿಯೂ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಯಮತ್ತೂರ್ ವೈದ್ಯ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular