HomeKarnatakaBIG NEWS: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ; ರೈಲು, ಬಸ್, ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್

BIG NEWS: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ; ರೈಲು, ಬಸ್, ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಬಾಂಬ್ ಸ್ಫೋಟ ಪ್ರಕರಣದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ರೈಲ್ವೆ, ಬಸ್, ವಿಮಾನ, ಮೆಟ್ರೋ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣ, ಬಸ್ ನಿಲ್ದಾಣ, ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮೆಟ್ರೋ ನಿಲ್ದಾಣಳಲ್ಲಿ ಪೊಲೀಸ್ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ರೈಲು ನಿಲ್ದಾಣಗಳಲ್ಲಿ ಭದ್ರತೆಗೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲು ಸೂಚಿಸಲಾಗಿದೆ.

ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳು ಕಂಡುಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ರೈಲ್ವೆ ಹಾಗೂ ವಿಮಾನ, ಬಸ್ ನಿಲ್ದಾಣಗಳಲ್ಲಿಯೂ ಕಟ್ಟೆಚ್ಚರಿಕೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಗಳಲ್ಲಿ ಹೋಮ್ ಗಾರ್ಡ್ ಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ. ಪ್ರಯಾಣಿಕರ ಮೇಲೆ ಕೆ ಎಸ್ ಆರ‍್ ಟಿಸಿ ಅಧಿಕಾರಿಗಳು ತೀವ್ರ ನಿಗಾ ಇಟ್ಟಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ ತಕ್ಷಣ ವಿಚಾರಣೆ ನಡೆಸಲು ಸೂಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular