HomeKarnatakaBIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಇಬ್ಬರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಇಬ್ಬರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಆರೋಪಿಗಳಾದ ಮೊಹಮ್ಮದ್ ಮತೀನ್ ಹಾಗೂ ಮುಸಾವಿರ್ ಹುಸೇನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಎನ್ ಐಎ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಇಬ್ಬರು ಆರೋಪಿಗಳ ಎನ್ ಐಎ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಎನ್ ಐಎ ಕೋರ್ಟ್ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಮಾರ್ಚ್ 1ರಂದು ಮಧ್ಯಾಹ್ನ ಬಾಂಬ್ ಸ್ಫೋಟ ನಡೆದಿತ್ತು. ಘಟನೆಯಲ್ಲಿ 9 ಜನರು ಗಾಯಗೊಂಡಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular