‘BMTC’ಯಲ್ಲಿ‘ಅನುಕಂಪದ’ ಉದ್ಯೋಗ : ಮೃತ ನೌಕರರ ಕುಟುಂಬಕ್ಕೆ ನೇಮಕಾತಿ ಪತ್ರ ವಿತರಿಸಿದ ರಾಮಲಿಂಗಾರೆಡ್ಡಿ

ಬೆಂಗಳೂರು : ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಅನುಕಂಪದ ಆಧಾರದಡಿಯಲ್ಲಿ ಸೂಕ್ತ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರಗಳನ್ನು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ವಿತರಿಸಿದ್ದಾರೆ. 

ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿಗಾಗಿ ನಿರೀಕ್ಷಣೆಯಲ್ಲಿದ್ದ ಮೃತಾವಲಂಭಿತ ಅಭ್ಯರ್ಥಿಗಳ ಪೈಕಿ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಸುಮಾರು 200 ಮಂದಿಯನ್ನು ಕಳೆದ ಅಕ್ಟೋಬರ್ ಮತ್ತು ನವೆಂಬರ್-2023ರಲ್ಲಿ ದರ್ಜೆ-3 (ಮೇಲ್ವಿಚಾರಕೇತರ) ಮತ್ತು ದರ್ಜೆ-4ರ ಖಾಲಿ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಜೊತೆಗೆ, ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಮೃತಾವಲಂಭಿತರುಗಳನ್ನು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಿ ಕಿರಿಯ ಸಹಾಯಕ ಕಂ ಡೇಟಾ ಎಂಟ್ರಿ ಆಪರೇಟರ್, ದರ್ಜೆ-3 (ಮೇಲ್ವಿಚಾರಕೇತರ) ಹುದ್ದೆಗೆ 50 ಮಂದಿಯನ್ನು ನೇಮಕ ಮಾಡಲಾಗಿದೆ.

ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಮಚಂದ್ರನ್, ಶ್ರೀಮತಿ ಶಿಲ್ಪ.ಎಂ, ಸಹಿತ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read