BREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಕೇಸ್: ಮೊದಲ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಆರೋಪಿ ಮುಜಾಮಿಲ್ ಷರೀಫ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಮುಜಾಮಿಲ್ ಷರೀಫ್ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿಯಾಗಿದ್ದಾನೆ. ಈತ ಬಾಂಬರ್ ಗೆ ಸಹಾಯ ಮಾಡಿದ್ದ ಎಂದು ಹೇಳಲಾಗಿದೆ. ಕರ್ನಾಟಕ ಸೇರಿದಂತೆ ವಿವಿಧಡೆ ರಾಷ್ಟ್ರೀಯ ತನಿಖಾ ದಳ ದಾಳಿಯ ವೇಳೆ ಶರೀಫ್ ನನ್ನು ಬಂಧಿಸಲಾಗಿದೆ.

ನಿನ್ನೆ ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿದ್ದು, ದಾಳಿಯ ವೇಳೆ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮುಸಾವೀರ್ ಹುಸೇನ್ ಬಾಂಬ್ ಇಟ್ಟ ಉಗ್ರ. ಮುಸಾವೀರ್ ಮತ್ತು ಅಬ್ದುಲ್ ಮತೀನ್ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ಅಬ್ದುಲ್ ಮತೀನ್ ಮತ್ತು ಮುಸಾವೀರ್ ಹುಸೇನ್ ಗೆ ಶರೀಫ್ ಆಪ್ತನಾಗಿದ್ದ ಎಂದು ತನಿಖೆ ವೇಳೆ ಪತ್ತೆಯಾಗಿದೆ .

ಅಬ್ದುಲ್ ಮತೀನ್ ಮತ್ತು ಮುಸಾವೀರ್ ಹುಸೇನ್ ಸದ್ಯ ತಲೆಮರೆಸಿಕೊಂಡಿದ್ದಾರೆ. ಇವರಿಗೆ ಮುಜಾಮಿಲ್ ಸ್ಪೋಟಕಗಳನ್ನು ಸರಬರಾಜು ಮಾಡಿದ್ದ. ತನಿಖೆ ಬೆಳೆ ಮುಜಾಮಿಲ್ ಶರೀಫ್ ಸಂಚು ಸಾಬೀತು ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಮೂವರು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ನಗದು ಸೇರಿದಂತೆ ಡಿಜಿಟಲ್ ಡಿವೈಸ್ ಗಳನ್ನು ಎನ್ಐಎ ತಂಡ ವಶಕ್ಕೆ ಪಡೆದುಕೊಂಡಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read