ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ; ಸರಿಗಮಪ ಗ್ರ್ಯಾಂಡ್ ಫಿನಾಲೆ ಮುಂದೂಡಿಕೆ

ಯಾದಗಿರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಭೀತಿ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಯ ಸರಿಗಮಪ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮವನ್ನೇ ಮುಂದೂಡಲಾಗಿದೆ.

ಖಾಸಗಿ ವಾಹಿನಿಯೊಂದರ ಜನಪ್ರಿಯ ಕಾರ್ಯಕ್ರಮ ಸರಿಗಮಪ ಗ್ರ್ಯಾಂಡ್ ಫಿನಾಲೆಯನ್ನು ಯಾದಗಿರಿ ನಗರದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಿದ್ಧತೆ ಕೂಡ ನಡೆದಿತ್ತು. ಆದರೆ ಈ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಶಂಕಿತ ಯಾದಗಿರಿ ಮಾರ್ಗವಾಗಿ ಸಂಚರಿಸಿದ್ದು, ಕಲಬುರ್ಗಿಯಿಂದ ಯಾದಗಿರಿ ಮೂಲಕವಾಗಿ ಪ್ರಯಾಣಿಸಿದ್ದಾನೆ ಎಂದು ತಿಳಿದುಬಂದಿದೆ. ಶಂಕಿತನಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯಾದಗಿರಿಯಲ್ಲಿ ಕಾರ್ಯಕ್ರಮ ಆಯೋಜಿಸಿ ರಿಸ್ಕ್ ತೆಗೆದುಕೊಳ್ಳುವುದು ಬೇಡ ಎಂಬ ಕಾರಣಕ್ಕೆ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ಮುಂದೂದಲಾಗಿದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read