HomeIndiaBIG UPDATE : 'ರಾಮೇಶ್ವರಂ ಕೆಫೆ ಸ್ಪೋಟ’ ಪ್ರಕರಣದ ಬಾಂಬರ್ ಪುಣೆಯಲ್ಲಿರುವ ಅಡಗಿರುವ ಶಂಕೆ –...

BIG UPDATE : ‘ರಾಮೇಶ್ವರಂ ಕೆಫೆ ಸ್ಪೋಟ’ ಪ್ರಕರಣದ ಬಾಂಬರ್ ಪುಣೆಯಲ್ಲಿರುವ ಅಡಗಿರುವ ಶಂಕೆ – ವರದಿ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಬಾಂಬರ್ ಗಾಗಿ ಎನ್ ಐ ಎ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದು, ಬಾಂಬರ್ ಪುಣೆಯಲ್ಲಿರುವ ಅಡಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಬಾಂಬ್ ಸ್ಪೋಟದ ಬಾಂಬರ್ ಈಗ ಪುಣೆಯಲ್ಲಿರುವ ಶಂಕೆ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿದೆ. ಈ ನಿಟ್ಟಿನಲ್ಲಿ ಎನ್ ಐ ಎ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಇಂದು ಆರೋಪಿಯ ಕ್ಲಾರಿಟಿ ಫೋಟೋ ಬಿಡುಗಡೆಯಾಗಿದ್ದು, ಸದ್ಯ ಎನ್ ಐ ಎ ಅಧಿಕಾರಿಗಳು ಹೆಣೆದ ಬಲೆಗೆ ಬೀಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ ಐ ಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ತನಿಖೆ ಚುರುಕುಗೊಳಿಸಿದೆ. ಪ್ರಕರಣದ ಹಿಂದೆ ಐಸಿಸ್ ಉಗ್ರರ ನಂಟಿರುವ ಸುಳಿವು ಲಭ್ಯವಾಗಿದೆ ಎನ್ನಲಾಗಿದೆ. ಶಂಕಿತರು ಪರಾರಿಯಾಗಲು ಸಮುದ್ರ ಮಾರ್ಗವನ್ನು ಬಳಕೆ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದ ಆಯಕಟ್ಟಿನ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular