ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾಗೆ ಅಶ್ಲೀಲ ಮೆಸೇಜ್ ಹಾಗೂ ಕಮೆಂಟ್ ರವಾನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ಮೂಲದ ನಟ ದರ್ಶನ್ ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಬಂಧಿತ ಆರೋಪಿ. ವಿಜಯಪುರದಲ್ಲಿ ಗಾರೆ ಕೆಲಸ ಮಾಡುತ್ತಿದ ಸಂತೋಷ್ ರಮ್ಯಾಗೆ ಅಶ್ಲೀಲ ಕಮೆಂಟ್ ಕಳುಹಿಸಿದ್ದ.
ಅಶ್ಲೀಲ ಸಂದೇಶ್ ರವಾನಿಸಿದ ಪ್ರಕರಣ ಸಂಬಂಧ ನಟಿ ರಮ್ಯಾ ದೂರು ನೀಡಿದ್ದರು. 48 ಜನರ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು 15 ಜನರನ್ನು ಪತ್ತೆ ಮಾಡಿದ್ದು ಈಗಾಗಲೇ ಹಲವರನ್ನು ಬಂಧಿಸಿದ್ದಾರೆ.