ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಕಿತ್ತಾಟ ಜೋರಾಗಿದ್ದು, ದಿನಕ್ಕೊಂದು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಅಧಿಕಾರ ಹಸ್ತಾಂತರ ವಿಚಾರವಾಗಿ ಎದ್ದಿರುವ ಗೊಂದಲಗಳ ಬಗ್ಗೆ ಮಾಜಿ ಸಂಸದೆ, ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಅಂದ್ರೆ ಹಾಗೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟಿ ರಮ್ಯಾ, ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್ ನಿರ್ಧಾರ ಮಾಡಬೇಕು. ಈ ಬಗ್ಗೆ ನಾನು ಮಾತನಾಡಲು ಆಗಲ್ಲ, ಅಧಿಕಾರ ಹಂಚಿಕೆ ಬಗ್ಗೆ ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದಿದ್ದಾರೆ.
ಸೀನಿಯರ್ ಲೀಡರ್ ಗಳು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಸೇರಿ ಎಲ್ಲರೂ ತೀರ್ಮಾನ ಮಾಡುತ್ತಾರೆ. ಯಾರೇ ಸಿಎಂ ಆದರೂ ಓಕೆ. ರಾಜ್ಯಕ್ಕೆ ಒಳ್ಳೆಯದಾಗಬೇಕು ಅಷ್ಟೇ ಎಂದು ಹೇಳಿದ್ದಾರೆ.
